ಸುದ್ದಿಮೂಲ ವಾರ್ತೆ ಬೆಂಗಳೂರು, ಅ.08:
ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆೆ ಭದ್ರ ಅಡಿಪಾಯ ಹಾಕುವ ‘ನೀರಿದ್ದರೆ ನಾಳೆ’ ಎನ್ನುವ ವಿನೂತನ ಯೋಜನೆಗೆ ಗುರುವಾರ (ಅ.9) ಮುಖ್ಯಮಂತ್ರಿಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದರು.
ಇಂದು ವಿಕಾಸಸೌಧದ ಕಚೇರಿಯಲ್ಲಿ ಪತ್ರಿಿಕಾಗೋಷ್ಠಿಿಯಲ್ಲಿ ಮಾತನಾಡಿದ ಅವರು, ರಾಜ್ಯದ 15 ಜಿಲ್ಲೆಗಳ, 27 ತಾಲ್ಲೂಕಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಿಯಲ್ಲಿರುವ 525 ಗ್ರಾಾಮ ಪಂಚಾಯ್ತಿಿಗಳಲ್ಲಿ ’ನೀರಿದ್ದರೆ ನಾಳೆ’ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾಾನಗೊಳಿಸಲಾಗುವುದು ಎಂದರು.
ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆೆ ಭದ್ರ ಅಡಿಪಾಯ ಹಾಕುವ ಉದ್ದೇಶ ಈ ಯೋಜನೆಯದ್ದಾಗಿದೆ. ’ನೀರಿದ್ದರೆ ನಾಳೆ’ ಎನ್ನುವ ವಿಶೇಷ ಪರಿಕಲ್ಪನೆಯ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಾಗಿ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲ್ಲೂಕುಗಳ 525 ಅಂತರ್ಜಲ ಅತಿಬಳಕೆ ಗ್ರಾಾಮ ಪಂಚಾಯತಿಗಳಲ್ಲಿ ಈ ಯೋಜನೆ ಅನುಷ್ಠಾಾನಗೊಳಿಸಲಾಗುತ್ತಿಿದೆ. ಈ ಪೈಕಿ ಕಲ್ಯಾಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಾಮ ಪಂಚಾಯತಿಗಳಿವೆ ಎಂದರು.
ಕನ್ನಡ ಚಿತ್ರರಂಗದ ಖ್ಯಾಾತ ನಟರಾದ ವಶಿಷ್ಟ ಸಿಂಹ ಅವರನ್ನು ರಾಯಭಾರಿಯನ್ನಾಾಗಿ ನೇಮಿಸಲಾಗಿದೆ. ನಾಳೆ ವಿಧಾನಸೌಧದ ಬ್ಯಾಾಂಕ್ವೆೆಟ್ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾಾದ್ಯಂತ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.
ಪತ್ರಿಿಕಾಗೋಷ್ಠಿಿಯಲ್ಲಿ ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ದಿ ಇಲಾಖೆ ಕಾರ್ಯದರ್ಶಿ ಬಿ.ಕೆ ಪವಿತ್ರ ಉಪಸ್ಥಿಿತರಿದ್ದರು.
ಕೆರೆಗಳ ಬರ್ ಝೋನ್ ತಿದ್ದುಪಡಿ ವಿಧೇಯಕ: ರಾಜ್ಯಪಾಲರಿಗೆ ಶೀಘ್ರವೇ ವಿವರಣೆ ಸಲ್ಲಿಕೆ
ಬೆಂಗಳೂರು, ಅ.8: ಕೆರೆಗಳ ಬರ್ ಝೋನ್ಗೆ ಸಂಬಂಧಿಸಿದ ತಿದ್ದುಪಡಿ ವಿಧೇಯಕದ ಕುರಿತಂತೆ ಕಾನೂನು ತಜ್ಞರ ಸಲಹೆಯೊಂದಿಗೆ ಶೀಘ್ರದಲ್ಲೇ ರಾಜ್ಯಪಾಲರಿಗೆ ವಿವರಣೆಯನ್ನು ಸಲ್ಲಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅವರು ತಿಳಿಸಿದ್ದಾರೆ.
ಈ ಐತಿಹಾಸಿಕ ತಿದ್ದುಪಡಿಯು ವೈಜ್ಞಾನಿಕವಾದ ಅಧ್ಯಯನದ ಮೂಲಕ ಕೈಗೊಳ್ಳಲಾಗಿದೆ. ಬೆಂಗಳೂರು ಮೂಲದ ಸಂಸ್ಥೆೆಯ ದೂರಿನ ಅನ್ವಯ ರಾಜ್ಯಪಾಲರು ವಿವರಣೆ ಕೇಳಿದ್ದಾರೆ. ಈ ಹಿನ್ನಲೆಯಲ್ಲಿ ಅಗತ್ಯ ವಿವರಣೆ ಸಲ್ಲಿಸಲಾಗುವುದು.
ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಹಾಗೂ ಸಂಬಂಧಿತ ಇಲಾಖೆಗಳ ಕಾರ್ಯದರ್ಶಿಗಳ ಸದಸ್ಯರನ್ನೊೊಳಗೊಂಡ ಸಮಿತಿಯ ನಿರ್ಧಾರದಂತೆ ತಿದ್ದುಪಡಿ ವಿಧೇಯಕವನ್ನು ಸಿದ್ದಪಡಿಸಿ ಉಭಯ ಸದನಗಳಲ್ಲಿ ಮಂಡಿಸಲಾಗಿತ್ತು. ಇದಕ್ಕೆೆ ಉಭಯ ಸದನದಲ್ಲೂ ಒಪ್ಪಿಿಗೆ ದೊರೆತಿದೆ. ದೂರಿನ ಹಿನ್ನಲೆಯಲ್ಲಿ ರಾಜ್ಯಪಾಲರು ವಿವರಣೆ ಕೇಳಿದ್ದು, ಇದಕ್ಕೆೆ ವಿವರಣೆ ಸಿದ್ದಪಡಿಸಲಾಗುತ್ತಿಿದೆ. ಸದ್ಯದಲ್ಲೆ ರಾಜ್ಯಪಾಲರಿಗೆ ವಿವರಣೆ ಸಲ್ಲಿಸಲಾಗುವುದು ಎಂದರು.

