ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.29:
ಮುಖ್ಯಮಂತ್ರಿಿಗಳ ಮೂಲಸೌಕರ್ಯ ಅಭಿವೃದ್ಧಿಿ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾಾರಿ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಹೇಳಿದರು.
ಗೃಹ ಕಚೇರಿ ಕೃಷ್ಣಾಾದಲ್ಲಿ ಸೋಮವಾರ ಅವರು ಮುಖ್ಯಮಂತ್ರಿಿಗಳ ಮೂಲಸೌಕರ್ಯ ಅಭಿವೃದ್ಧಿಿ ಯೋಜನೆ ಹಾಗೂ ರೈಲ್ವೇ ಯೋಜನೆಗಳ ಭೂಸ್ವಾಾಧಿನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.
2025-26 ನೇ ಸಾಲಿನಲ್ಲಿ ಮುಖ್ಯಮಂತ್ರಿಿಗಳ ಮೂಲಸೌಕರ್ಯ ಅಭಿವೃದ್ಧಿಿ ಯೋಜನೆಯಡಿ 8,666.50 ಕೋಟಿ ರೂ. ಅನುಮೋದನೆ ನೀಡಲಾಗಿದ್ದು, ಈಗಾಗಲೇ ರೂ.1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾಾರಿ. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಬೇಕು ಎಂದು ಮುಖ್ಯಮಂತ್ರಿಿ ಸೂಚಿಸಿದರು.
ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು ರೂ. 8666.50 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಟೆಂಡರ್ ಪ್ರಕ್ರಿಿಯೆಗಳನ್ನು ಜನವರಿ 10ರೊಳಗಾಗಿ ಪೂರ್ಣಗೊಳಿಸಲು ಸೂಚಿಸಿದರು.
ಇದಲ್ಲದೆ, 2023-24 ರಲ್ಲಿ ಮುಖ್ಯಮಂತ್ರಿಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಾಪ್ತಿಿಗೆ ತಲಾ 25 ಕೋಟಿ ರೂ.ಗಳಂತೆ ಒಟ್ಟು 3510 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ಈಗಾಗಲೇ 2040 ಕೋಟಿ ರೂ. ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, 920 ಕೋಟಿ ರೂ. ವೆಚ್ಚ ಭರಿಸಲಾಗಿದೆ. ಇನ್ನೂ 1205 ಕೋಟಿ ರೂ. ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ ಎಂದು ಸಿಎಂ ಹೇಳಿದರು.
ಅನುಷ್ಠಾಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ರಸ್ತೆೆ ದುರಸ್ತಿಿಗೆ 250 ಕೋಟಿ :
2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆೆ ದುರಸ್ತಿಿಗಾಗಿ 1890 ಕೋಟಿ ರೂ. ಮೊತ್ತಕ್ಕೆೆ ಅನುಮೋದನೆ ನೀಡಲಾಗಿದ್ದು, ಈ ಪೈಕಿ 250 ಕೋಟಿ ರೂ.ಬಿಡುಗಡೆ ಮಾಡಲಾಗಿದೆ.
ರೈಲ್ವೇ ಮತ್ತು ವಿಮಾನ ನಿಲ್ದಾಾಣ:
ರೈಲ್ವೇ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಾಧೀನ ಪ್ರಕ್ರಿಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲಾ ಅಗತ್ಯ ಪ್ರಕ್ರಿಿಯೆಗಳನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಹೇಳಿದರು.
ರಾಜ್ಯದಲ್ಲಿ ಅನುಮೋದನೆಗೊಂಡಿರುವ ಎಲ್ಲಾ ರೈಲು ಯೋಜನೆಗಳಿಗೆ ಒಟ್ಟು 16,554 ಎಕರೆ ಭೂಮಿ ಅವಶ್ಯಕತೆ ಇರುತ್ತದೆ. ಇದರ ಪೈಕಿ ಶೇ.84 ಭೂಮಿಯನ್ನು ಸ್ವಾಾಧೀನ ಪಡಿಸಿಕೊಳ್ಳಲಾಗಿದೆ. ಇನ್ನೂ ಅಂದಾಜು 2,685 ಎಕರೆಗಳಷ್ಟು ಭೂಮಿ ಸ್ವಾಾಧೀನ ಪಡಿಸಿಕೊಳ್ಳಬೇಕಿದೆ. ರಾಜ್ಯದಲ್ಲಿ ಪ್ರಗತಿಯಲ್ಲಿರುವ ವಿವಿಧ ರೈಲ್ವೆೆ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ನಿರ್ಮಾಣ ಕಾಮಗಾರಿಗಳಿಗೆ 2581.67 ಕೋಟಿ ರೂಪಾಯಿ , ಭೂಸ್ವಾಾಧೀನ ಪ್ರಕ್ರಿಿಯೆಗೆ 2950.22 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಾಣಗಳ ಕಾಮಗಾರಿಗಳು ಅನುಷ್ಠಾಾನದ ವಿವಿಧ ಹಂತದಲ್ಲಿವೆ. ಹಾಸನ ವಿಮಾನ ನಿಲ್ದಾಾಣ ಭೂಸ್ವಾಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗನೆ ವಿತರಿಸಬೇಕು. ಎಲ್ಲಾ ವಿಮಾನ ನಿಲ್ದಾಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಎಂ ಬಿ ಪಾಟೀಲ್, ಕೆ ಎಚ್ ಮುನಿಯಪ್ಪ, ಪ್ರಿಿಯಾಂಕ ಖರ್ಗೆ, ರಹೀಂ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ವಿಡಿಯೋ ಸಂವಾದದ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಮೆಕ್ಕೆೆಜೋಳ ಖರೀದಿ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಿಕ್ ಟನ್ ಮೆಕ್ಕೆೆಜೋಳ ಖರೀದಿ ಮಾಡಿದ್ದು, ಇನ್ನೂ 76430 ಮೆ.ಟನ್ ಖರೀದಿಸಲು ಬಾಕಿಯಿದೆ. ಒಟ್ಟು 93,782 ಮೆ.ಟನ್ ಮೆಕ್ಕೆೆಜೋಳ ಖರೀದಿಗೆ ಇಂಡೆಂಟ್ ಪಡೆಯಲಾಗಿದ್ದು, ನಿಗದಿತ ಪ್ರಮಾಣದ ಮೆಕ್ಕೆೆಜೋಳ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಿ ಸಭೆಯಲ್ಲಿ ಸೂಚನೆ ನೀಡಿದರು.
ಎಥೆನಾಲ್ ಖರೀದಿ ಕುರಿತಾಗಿ ಕೇಂದ್ರ ಸರ್ಕಾರಕ್ಕೆೆ ಮಾಡಿದ್ದ ಮನವಿಗೆ ಇದುವರೆಗೆ ಯಾವುದೇ ಪ್ರತಿಕ್ರಿಿಯೆ ಬಂದಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಮೆಕ್ಕೆೆಜೋಳ ಬೆಳೆಗಾರರ ಕುರಿತು ನಕಾರಾತ್ಮಕ ಧೋರಣೆಯನ್ನು ಮುಂದುವರೆಸಿದೆ. ಈ ಹಿನ್ನೆೆಲೆಯಲ್ಲಿ ಇಂಡೆಂಟ್ ನಿಗದಿಪಡಿಸಿರುವ ಪ್ರಮಾಣದಷ್ಟು ಮೆಕ್ಕೆೆಜೋಳ ಖರೀದಿಗೆ ಸ್ಥಳೀಯ ಸಂಸ್ಥೆೆಗಳು ಕ್ರಮ ಕೈಗೊಳ್ಳಬೇಕು.
ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ತಾಕೀತು: ಜಿಲ್ಲಾ ಉಸ್ತುವಾರಿ ಸಚಿವರು ನಿಗಾ ವಹಿಸಲು ಸೂಚನೆ ಸಿಎಂ ಮೂಲಸೌಕರ್ಯ ಯೋಜನೆ ಕಾಮಗಾರಿ ತ್ವರಿತಗೊಳಿಸಿ

