ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 19: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್ಗಾಂಧಿ ಸಹಿತ ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದ್ದು, ಮೇ 20ರಂದು ಶನಿವಾರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಅಂದಿನ ಕಾರ್ಯಕ್ರಮದಲ್ಲಿ ಸೋನಿಯಾಗಾಂಧಿ, ರಾಹುಲ್ಗಾಂಧಿ, ಪ್ರಿಯಾಂಕ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಚತ್ತೀಸ್ಘಡ ಮುಖ್ಯಮಂತ್ರಿ ಭೂಪೇಂದ್ರ ಬಗೇಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಾಂಡಿಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಕರ್ನಾಟಕದ ಪೂರ್ಣ ಬಹುಮತದ ಕಾಂಗ್ರೆಸ್ ಸರ್ಕಾರ ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ಉದ್ದೇಶದಿಂದ ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳು, ವಿವಿಧ ಪಕ್ಷಗಳ ನಾಯಕರು ಬಂದು ಒಗ್ಗಟ್ಟು ಪ್ರದರ್ಶಿಸಲಿದ್ದಾರೆ.