ಸುದ್ದಿಮೂಲ ವಾರ್ತೆ
ಬೆಂಗಳೂರು,ನ.5 : ನಂದಿನಿ ಲೇಔಟ್ ನಲ್ಲಿ ಬಿಬಿಎಂಪಿ ವತಿಯಿಂದ ನೂತನ ತಂತ್ರಜ್ಞಾನ ಬಳಸಿ ಮಾಡಲಾಗಿರುವ ಹಸಿಕಸ ಘನತಾಜ್ಯ ವಿಲೇವಾರಿ ಘಟಕವನ್ನು ಶಾಸಕ ಕೆ. ಗೋಪಾಲಯ್ಯ ಉದ್ಘಾಟಿಸಿದರು.
ನಂದಿನಿ ಲೇಔಟ್ ಸೇರಿದಂತೆ ಕ್ಷೇತ್ರದ ನಾಲ್ಕು ವಾರ್ಡ್ ಗಳಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ಕಂಪ್ರೆಸ್ ಮಾಡಿ ಮತ್ತೊಂದು ಕಸ ವಿಲೇವಾರಿ ಘಟಕಕ್ಕೆ ಕಳಿಸಿಕೊಡಲಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಎಇಇ ವೆಂಕಟೇಶ್, ಸ್ಥಳೀಯ ಮುಖಂಡರುಗಳಾದ ಲೋಕೇಶ್ ,ಸಂಪತ್ ಹನುಮಂತು, ಪ್ರಸನ್ನ ಉಪಸ್ಥಿತರಿದ್ದರು.