ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.19: ನಗರದಲ್ಲಿ ಬಾಕಿಯಿರುವ ಬೃಹತ್ ನೀರುಗಾಲುವೆಗಳ ಒತ್ತುವರಿಗಳ ತೆರವು ಕಾರ್ಯಚರಣೆಯನ್ನು ತ್ವರಿತಗತಿಯಲ್ಲಿ ನಡೆಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಚರಣೆಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆಯ ಎಂಟೂ ವಲಯಗಳಲ್ಲಿ ಬಾಕಿಯಿರುವ ಒತ್ತುವರಿಗಳನ್ನು ತ್ವರಿತಗತಿಯಲ್ಲಿ ತೆರವುಮಾಡಿ ಮಳೆ ನೀರುಗಾಲುವೆಗಳನ್ನು ನಿರ್ಮಿಸಿ ಎಲ್ಲಿಯೂ ಜಲಾವೃತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಯ ಒತ್ತುವರಿಗಳ ಪೈಕಿ 123 ಪ್ರಕರಣಗಳು ನ್ಯಾಯಾಲಯದಲ್ಲಿದ್ದು, ಅವುಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಂಡು ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೃಹತ್ ನೀರುಗಾಲುವೆ ಒತ್ತುವರಿಗಳ ವಿವರ
ಬಿಬಿಎಂಪಿ ವ್ಯಾಪ್ತಿಯಲ್ಲಿ 2015-16 ರಿಂದ ಇದುವರೆಗೆ ಒಟ್ಟಾರೆ 2951 ಒತ್ತುವರಿಗಳನ್ನು ಗುರುತಿಸಲಾಗಿದೆ. ಈ ಪೈಕಿ 2183 ಒತ್ತುವರಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದ್ದು, 768 ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಬೇಕಿದೆ. ಇದರಲ್ಲಿ 123 ಪ್ರಕರಣಗಳು ನ್ಯಾಯಾಲಯಕ್ಕೆ ಸಂಬಂಧಿಸಿದ್ದಾಗಿದ್ದು, 568 ಒತ್ತುವರಿಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಭೂಮಾಪಕರಿಂದ ಮಾರ್ಕಿಂಗ್ ಪ್ರಕ್ರಿಯೆ ನಡೆಸಿದ್ದು, ತಹಶೀಲ್ದಾರರಿಮದ ನೋಟಿಸ್ ನೀಡಲಾಗುತ್ತಿದೆ. ಹಂತ-ಹಂತವಾಗಿ ತ್ವರಿತಗತಿಯಲ್ಲಿ ಎಲ್ಲಾ ಅನಧಿಕೃತ ಒತ್ತುವರಿಗಳ ತೆರವು ಕಾರ್ಯಚರಣೆ ಕಾರ್ಯ ನಡೆಯಲಿದೆ.
ಸಭೆಯಲ್ಲಿ ವಲಯ ಆಯುಕ್ತರಾದ , ವಲಯ ಜಂಟಿ ಆಯುಕ್ತರು, ಪ್ರಧಾನ ಅಭಿತಂತರರು, ಕಾನೂನು ಕೋಶ ವಿಭಾಗ ಮುಖ್ಯಸ್ಥರು, ಎಲ್ಲಾ ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.