ಸುದ್ದಿಮೂಲ ವಾರ್ತೆ
ಬೆಂಗಳೂರು,ಮಾ.31: ಚುನಾವಣಾಧಿಕಾರಿಗಳ ವಿರುದ್ಧವೇ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಶಾಸಕ ಕೃಷ್ಣ ಭೈರೇಗೌಡ ದೂರು ನೀಡಿದ್ದಾರೆ. ಬ್ಯಾಟರಾಯನಪುರ ಕ್ಷೇತ್ರದ ಮತದಾರರಿಗೆ ಆಮಿಷವೊಡ್ಡಲು ಬಿಜೆಪಿ ಮುಖಂಡ ಕೋಟ್ಯಂತರ ಮೌಲ್ಯದ ಸಾಮಗ್ರಿ ಸಂಗ್ರಹಿಸಿದ್ದರು. ಆದರೂ ಚುನಾವಣಾ ಅಧಿಕಾರಿಗಳು ಯಾವುದೇ ಪ್ರಕರಣ ದಾಖಲಿಸಿಲ್ಲ. ಯಾರೋ ಬೇನಾಮಿ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿದ್ದು, ಕೇಸ್ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಚುನಾವಣಾಧಿಕಾರಿಗಳ ವಿರುದ್ಧವೇ ದೂರು ದಾಖಲಿಸಿದ್ದಾರೆ.