ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.24: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಲಿಂಗಾಯತ ಮುಖ್ಯಮಂತ್ರಿಗಳೆಲ್ಲಾ ಭ್ರಷ್ಟಾಷಾರ ಮಾಡಿದ್ದಾರೆ ಎಂಬ ಹೇಳಿಕೆ ವಿರುದ್ಧ ಬಿಜೆಪಿಯಿಂದ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಯಿತು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುತ್ತಾ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಮಾಡಿರುತ್ತಾರೆ ಎಂದು ಜಾತಿ ಉಲ್ಲೇಖಿಸಿ ಆರೋಪಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ರೀತಿಯಲ್ಲೇ ನಿರ್ದಿಷ್ಟ ಸಮುದಾಯದ ಅವಹೇಳನ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಲಾಗಿದೆ.
ಲಿಂಗಾಯತ ಸಮುದಾಯದ ವಕೀಲ ಬಸವರಾಜ ಹಳ್ಳದ್ ಹಾಗೂ ಇತರರು ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಯಿತು.