ಸುದ್ದಿಮೂಲ ವಾರ್ತೆ ಬೆಂಗಳೂರು, ಜ.13:
ಬಳ್ಳಾರಿ ಪಾದಯಾತ್ರೆೆ ಕುರಿತು ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾಾರೆ ಎಂದು ಬಿಜೆಪಿ ರಾಜ್ಯಾಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಪಕ್ಷದ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಬಳ್ಳಾಾರಿಯಲ್ಲಿ ಕಾಂಗ್ರೆೆಸ್ ಶಾಸಕರಿಂದ ನಡೆದ ಗಲಭೆ ವಿರೋಧಿಸಿ ಜ.17ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಿಕೊಳ್ಳಲಾಗಿದೆ ಎಂದು ಹೇಳಿದರು.
ವಿಸ್ತೃತ ಮಾದಕವಸ್ತು ಜಾಲದ ಕುರಿತು ಗಮನ ಸೆಳೆಯಲು ಮೈಸೂರಿನಲ್ಲಿ ಹೋರಾಟ ರೂಪಿಸಲಿದ್ದೇವೆ. ಮೈಸೂರು ಮುಖ್ಯಮಂತ್ರಿಗಳ ತವರು ಜಿಲ್ಲೆ. ಅಲ್ಲಿದ್ದ ಮಾದಕವಸ್ತು ಕಾರ್ಖಾನೆಯನ್ನು ಮಹಾರಾಷ್ಟ್ರದ ಪೊಲೀಸರು ಬಂದು ಮುಚ್ಚಿಿಸಬೇಕಾಯಿತು. ಮೈಸೂರು ಒಳಗೊಂಡಂತೆ ರಾಜ್ಯಾಾದ್ಯಂತ ಡ್ರಗ್ ಮಾಫಿಯ ಹರಡಿದೆ. ಇವನ್ನು ಪರಿಗಣಿಸಿ ಮೈಸೂರಿನಲ್ಲಿ ಹೋರಾಟ ಮಾಡಲು ತೀರ್ಮಾನ ಆಗಿದೆ ಎಂದು ತಿಳಿಸಿದರು.
ಧರ್ಮಸ್ಥಳದ ವಿಚಾರದಲ್ಲಿ ಮುಖ್ಯಮಂತ್ರಿಿಗಳೇ ಮುತುವರ್ಜಿ ವಹಿಸಿ ಕೆಲವು ನಗರ ನಕ್ಸಲರ ಮಾತು ಕೇಳಿ ಎಸ್ಐಟಿ ರಚಿಸಿದ್ದರು. ಧರ್ಮಸ್ಥಳದ ಶ್ರೀ ಕ್ಷೇತ್ರಕ್ಕೆೆ ಅಪಚಾರ ಎಸಗುವ ಕೆಲಸ ಮಾಡಿದ್ದರು ಎಂದು ಆಕ್ಷೇಪಿಸಿದರು. ಬಿಜೆಪಿ ಹೋರಾಟ ಮಾಡಿತ್ತು. ಗುಂಡಿ ಅಗೆದಾಗ ಏನೂ ಸಿಗದ ಸಂದರ್ಭದಲ್ಲಿ ಬುರುಡೆ ಗ್ಯಾಾಂಗ್ ಮೇಲೆ ಆರೋಪ ಮಾಡಿ ಹಿಂದೆ ಸರಿಯುವ ಕೆಲಸ ಸಿದ್ದರಾಮಯ್ಯನವರ ಸುತ್ತಲಿರುವವರು ಮಾಡಿದ್ದಾರೆ ಎಂದು ದೂರಿದರು. ನಾವು ಹೋರಾಟ ಮಾಡದೇ ಇದ್ದರೆ ಧರ್ಮಸ್ಥಳದ ಶ್ರೀ ಕ್ಷೇತ್ರಕ್ಕೆೆ ಅಪಚಾರ ಮಾಡುತ್ತಿಿದ್ದರು ಎಂದು ತಿಳಿಸಿದರು.
ನಿನ್ನೆೆ ನಮ್ಮ ಹಿರಿಯ ಶಾಸಕ ವಿಶ್ವನಾಥ್ ಅವರ ತಂಡವು ಕೋಗಿಲು ಸತ್ಯಶೋಧನೆ ಕುರಿತು ವರದಿ ಸಲ್ಲಿಸಿದೆ.
ಕೋಗಿಲು ವಿಚಾರದಲ್ಲಿ ಅಕ್ರಮ ವಲಸಿಗರ ಮನೆ ಕೆಡವಲಾಗಿತ್ತು. ಬಳಿಕ ಕೆ.ಸಿ.ವೇಣುಗೋಪಾಲ್ ಹೇಳಿದರು; ಬೆದರಿಕೆ ಹಾಕಿದರೆಂಬ ಕಾರಣ, ಕೇರಳ ವಿಧಾನಸಭಾ ಚುನಾವಣೆ ಬರುವ ನೆಪದಿಂದ ತೇಪೆ ಹಚ್ಚುವ ಕೆಲಸ ಮಾಡಲು ಸಿದ್ದರಾಮಯ್ಯರ ಸರಕಾರ ಹೊರಟಿತ್ತು ಎಂದು ಆರೋಪಿಸಿದರು.
ಲಕ್ಷಾಂತರ ಬಡವರು ಮನೆಗೆ ಅರ್ಜಿ ಹಾಕಿದ್ದರೂ ಅವರಿಗೆ ಮನೆ ಕೊಟ್ಟಿಿಲ್ಲ ಎಂದು ಬಿಜೆಪಿ ಗಮನ ಸೆಳೆದಿದೆ. ಅಕ್ರಮ ವಲಸಿಗರಿಗೆ ಅವಕಾಶ ಕೊಡುವುದಿಲ್ಲ; ತೆರಿಗೆದಾರರ ಹಣ ಪೋಲಾಗಲು ಬಿಡುವುದಿಲ್ಲ ಎಂದು ಬಿಜೆಪಿ, ನಮ್ಮ ಸ್ಥಳೀಯ ನಾಯಕರು ಇದನ್ನು ಗಟ್ಟಿಿಯಾಗಿ ತೆಗೆದುಕೊಂಡ ಬಳಿಕ ಅಕ್ರಮ ವಲಸಿಗರನ್ನು ರಾತ್ರೋೋರಾತ್ರಿಿ ಕಾಂಗ್ರೆೆಸ್ ಮುಖಂಡರೇ ಎತ್ತಂಗಡಿ ಮಾಡಿದ್ದಾರೆಂಬ ಮಾಹಿತಿ ಬರುತ್ತಿಿದೆ ಎಂದರು.
ನಮ್ಮ ಮುಖಂಡರು ಹೋದಾಗ ಅಲ್ಲಿ ಬೇರೆ ಕ್ಷೇತ್ರದ ಬಾಡಿಗೆ ವ್ಯಕ್ತಿಿಗಳನ್ನು ಬಿಟ್ಟ ಮಾಹಿತಿ ಸಿಗುತ್ತಿಿದೆ. ಈ ರೀತಿಯ ಡ್ರಾಾಮವನ್ನು ನಾವು ಒಪ್ಪುುವುದಿಲ್ಲ ಎಂದರು.
ಮಾಜಿ ಮುಖ್ಯಮಂತ್ರಿಿ ಮತ್ತು ಸಂಸದ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಪತ್ರಿಿಕಾಗೋಷ್ಠಿಿಯಲ್ಲಿ ಇದ್ದರು.
ಬಳ್ಳಾರಿ ಪಾದಯಾತ್ರೆ ವರಿಷ್ಠರಿಂದ ತೀರ್ಮಾನ: ವಿಜಯೇಂದ್ರ

