ಸುದ್ದಿಮೂಲ ವಾರ್ತೆ
ಕೊರಟಗೆರೆ, ಸೆ. 29 : ಕುಂಚಿಟಿಗ ಸಮುದಾಯಕ್ಕೆ ಮೀಸಲಾತಿ ವಿಚಾರ ಕುರಿತ ಮನವಿಯನ್ನು ಕಾಂಗ್ರೆಸ್ ಸರ್ಕಾರ ಪುರಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಓಬಿಸಿ ಪಟ್ಟಿಗೆ ಸೇರಿಸಲು ಮನವಿ ಮಾಡಿರುವುದು ಸ್ವಾಗತಾರ್ಹ ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥಸ್ವಾಮೀಜಿ ತಿಳಿಸಿದ್ದಾರೆ.
ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಮಾಹಿತಿ ನೀಡಿದ ಅವರು, ಕೇಂದ್ರ ಸರ್ಕಾರವು ನಮ್ಮ ಮನವಿಯನ್ನು ಪುರಸ್ಕರಿಸಿ ನಮ್ಮ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕು. ಈಗಾಗಲೇ ನಮ್ಮ ಸಮುದಾಯದ ಕುಲಶಾಸ್ತ್ರ ಅಧ್ಯಯನವನ್ನು ನಡೆಸಿ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ. ಆದರೆ ಹಿಂದೆ ಎಲ್ಲಾ ಸರ್ಕಾರಗಳೂ ಸಹ ಕೇವಲ ನಮ್ಮ ಮನವಿಯನ್ನು ಅಷ್ಟೇ ಸ್ವೀಕರಿಸಿತು. ಈ ಸರ್ಕಾರ ನಮ್ಮ ಸಮುದಾಯಕ್ಕೆ ಸಾಮಾಜಿಕ ನೆಲೆಗಟ್ಟಿನ ಅಡಿಯಲ್ಲಿ ನ್ಯಾಯ ದೊರಕಬೇಕಿದ್ದು ಸಮುದಾಯಕ್ಕೆ ನ್ಯಾಯ ಸಿಗಬೇಕು ಎಂದು ಅರಿತು ನಮಗೆ ನ್ಯಾಯ ದೊರಕಿಸಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಶ್ರೀಗಳು ತಿಳಿಸಿದ್ದಾರೆ.