ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ, 16: ಕಾಂಗ್ರೆಸ್ ನಾಯಕರು ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಅವರು, ‘ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಯೋಜನೆಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು, ಮಾಡಿಕೊಳ್ಳಲಿಲ್ಲ ಎಂದು ಹೇಳಿದರು.
ಮುಂಗಾರು ವಿಫಲವಾಗಿರುವ ಕಾರಣ ಕೇಂದ್ರ ಸರ್ಕಾರ ನೀತಿಯನ್ನು ಅನುಸರಿಸಲು ಮುಂದಾಗಿದೆ. ಈ ನೀತಿ ಕೇವಲ ಕರ್ನಾಟಕಕ್ಕೆ ಮಾತ್ರ ಅನ್ವಯವಾಗುತ್ತಿಲ್ಲ. ಬಿಜೆಪಿ ಆಡಳಿತದ ರಾಜ್ಯಗಳಿಗೂ ಅದು ಅನ್ವಯಿಸುತ್ತದೆ. ನಮ್ಮ ರೈತರಿಂದಲೇ ಖರೀದಿ ಮಾಡಿ, ಕೇಂದ್ರ ಸರ್ಕಾರದ ಮೇಲೆ ಏಕೆ ಗೂಬೆ ಕೂರಿಸುತ್ತಿದ್ದೀರಿ? ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತರದಿದ್ದರೆ ಪ್ರತಿಭಟನೆ ನಡೆಸುತ್ತೇವೆಂದು ಎಚ್ಚರಿಸಿದರು.