ಸುದ್ದಿಮೂಲ ವಾರ್ತೆ
ಬೆಂಗಳೂರು,ನ.21 : ಹೋಪ್ ಪಾರಂ ಬಳಿ ವಿದ್ಯುತ್ ಅವಘಡ ದಿಂದ ತಾಯಿ-ಮಗು ಸಾವನ್ನಪ್ಪಿರುವ ಮನೆಗೆ ತೆರಳಿ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿದ ಅವರು, ಸಾರ್ವಜನಿಕ ಪ್ರದೇಶದಲ್ಲಿ ಮತ್ತೆ ಈ ರೀತಿಯ ಅವಘಡ ಜರುಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಕರಣವನ್ನು ನ್ಯಾಯಬದ್ಧವಾಗಿ
ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ಕ್ರಮ ಕೈಗೊಳ್ಳುವ ಮೂಲಕ ತಾಯಿ ಮತ್ತು ಮಗು ಸಾವಿಗೆ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ನಟರಾಜ್, ಮಾರಪ್ಪ, ಪಿಳ್ಳಪ್ಪ ಮತ್ತಿತರರು ಹಾಜರಿದ್ದರು.