ಸುದ್ದಿಮೂಲ ವಾರ್ತೆ ಬೆಂಗಳೂರು, ನ.20:
ಅಂತರಿಕ್ಷ ಯಾತ್ರಿಿಕ ಗ್ರೂಪ್ ಕ್ಯಾಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ನವೆಂಬರ್ 25 ರಂದು ಆಯೋಜಿಸಲಾಗಿದ್ದು, ಅಗತ್ಯ ಸಿದ್ದತೆಗಳನ್ನು ನಡೆಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜೆಎನ್ಪಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಜೆಎನ್ಪಿಿ ಸಹಯೋಗದಲ್ಲಿ ಜವಾಹರಲಾಲ್ ನೆಹರು ಪ್ಲಾಾನೆಟೇರಿಯಂನ ಯು.ಆರ್.ರಾವ್ ಭವನದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಅಂತರಿಕ್ಷ ಯಾತ್ರಿಿಕ ಗ್ರೂಪ್ ಕ್ಯಾಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾಾರ್ಥಿಗಳಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
ಹೈಸ್ಕೂಲ್ ಶಾಲಾ ವಿದ್ಯಾಾರ್ಥಿಗಳಿಗೆ ನೇರವಾಗಿ ಅಂತರಿಕ್ಷ ಯಾತ್ರಿಿಕರೊಂದಿಗೆ ಸಂವಾದಿಸಲು ಇದು ಅವಕಾಶ ಕಲ್ಪಿಿಸಲಿದೆ. ರಾಜ್ಯದ ಇನ್ನಿಿತರೆ ಭಾಗಗಳ ವಿದ್ಯಾಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊೊಳ್ಳಲು ಪ್ರಾಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ವ್ಯವಸ್ಥೆೆ ಮಾಡುವಂತೆ ಸಚಿವರು ಸೂಚನೆ ನೀಡಿದರು.
ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ವಿಜ್ಞಾನ, ಸಂಶೋಧನೆ ಹಾಗೂ ಬಾಹ್ಯಾಾಕಾಶ ಅನ್ವೇಷಣೆಯತ್ತ ಪ್ರೇೇರೇಪಿಸುತ್ತವೆ. ಕರ್ನಾಟಕವು ಸದಾ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಗತಿಯಲ್ಲಿ ಮುಂಚೂಣಿಯಲ್ಲಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಕುತೂಹಲ ಮತ್ತು ಹೊಸ ಆಲೋಚನೆಯನ್ನು ಬೆಳೆಸಲು ನೆರವಾಗುತ್ತವೆ.
ರಾಜ್ಯದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿಿನಲ್ಲಿ ನಮ್ಮ ಸರ್ಕಾರ ಬದ್ದವಾಗಿದೆ. ಈ ಕಾರ್ಯಕ್ರಮ ವಿದ್ಯಾಾರ್ಥಿಗಳಿಗೆ ಅಂತರಿಕ್ಷ ಯಾತ್ರಿಿಕರೊಂದಿಗೆ ಸಂವಾದಿಸಲು ಅಪರೂಪದ ಅವಕಾಶ ಒದಗಿಸುತ್ತದೆ. ಇದು ಅವರಲ್ಲಿ ಬಾಹ್ಯಾಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರಿಯುವ ಉತ್ಸಾಾಹವನ್ನು ಇನ್ನಷ್ಟು ಪೋಷಿಸಲಿದೆ. ಈ ನಿಟ್ಟಿಿನಲ್ಲಿ ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜವಾಹರಲಾಲ್ ನೆಹರು ಪ್ಲಾಾನೆಟೇರಿಯಂನಲ್ಲಿ ಸಂವಾದ ಕಾರ್ಯಕ್ರಮ: ಎನ್.ಎಸ್. ಭೋಸರಾಜು ನ.25ರಂದು ವಿದ್ಯಾಾರ್ಥಿಗಳೊಂದಿಗೆ ಶುಭಾಂಶು ಶುಕ್ಲ ಸಂವಾದ

