ಸುದ್ದಿಮೂಲ ವಾರ್ತೆ
ಮೈಸೂರು, ಅ.30:ನಗರದ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ದುರ್ಗಾ ಫೌಂಡೇಶನ್ ಹಾಗೂ ಮೇಕ್ ಸೊಸೈಟಿ ಸ್ಮೈಲ್ ಫೌಂಡೇಶನ್ ವತಿಯಿಂದ ಆಯೋಜಿಸಿದ ದಸರಾ ಯುವತಿಯರು, ಮಹಿಳೆಯರು ಮತ್ತು ಮಕ್ಕಳ ವೇಷಭೂಷಣ ಸ್ಪರ್ಧೆ 50ಕ್ಕೂ ಹೆಚ್ಚು ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು.
ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ಮಾತನಾಡಿ, ವೇಗವಾಗಿ ಬದಲಾಗುತ್ತಿರುವ ಇಂದಿನ ಜಗತ್ತಿಗೆ ಹೊಂದಿಕೊಂಡು ನಮ್ಮ ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸಿ ಮುಂದೆ ಸಾಗಬೇಕಾದ ಅನಿವಾರ್ಯತೆ ಮಹಿಳೆಯರಿಗಿದೆ. ಎಲ್ಲಿ ನಾರಿಯರನ್ನು ಗೌರವಿಸಲಾಗುತ್ತದೋ ಅಲ್ಲಿ ದೇವರು ವಾಸಿಸುತ್ತಾನೆ ಎಂಬುದು ಭಾರತೀಯರ ನಂಬಿಕೆಯಾಗಿದೆ. ಮಹಿಳೆಯರೆಲ್ಲ ಸ್ವ-ಇಚ್ಛೆಯಿಂದ ಸ್ವಯಂ ಪ್ರೇರಿತರಾಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಾಗಬೇಕು ಎಂದು ಹೇಳಿದರು.
ನಂತರ ವಿಜೇತರಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಗರ ಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಸೆಂಟ್ ಮೈಕಲ್ ಪದವಿ ಪೂರ್ವ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಡಾ.ಸಾಜೀಯಾ ಸುಲ್ತಾನ್, ಮಹರ್ಷಿ ಪಬ್ಲಿಕ್ ಶಾಲೆಯ ಭವಾನಿ ಶಂಕರ್, ಚಾಮುಂಡಿ ಬೆಟ್ಟದ ಶ್ರೀ ಮಹಾಬಲಾದ್ರಿ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕಿ ಮಂಜುಳ ಸೋಮಣ್ಣ, ಜೀವದಾರರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಹಾಗೂ ಮುತ್ತಣ್ಣ,
ಎನ್ಐಇ ಕಾಲೇಜು ಪ್ರಾಧ್ಯಾಪಕಿ ಡಾ.ವನಮಾಲ, ಮೇಕ್ ಸೊಸೈಟಿ ಸ್ಮೈಲ್ ಫೌಂಡೇಶನ್ ಅಧ್ಯಕ್ಷೆ ರಂಜಿತಾ ಸುಬ್ರಹ್ಮಣ್ಯ, ಸಮಾಜ ಸೇವಕ ಸೀಮಾ ಸೆರಾವ್, ಶಿವಮೊಗ್ಗ ಬ್ಯೂಟಿಷಿಯನ್ ಅಸೋಸಿಯೇಷನ್ ಅಧ್ಯಕ್ಷೆ ಅಶ್ವಿನಿ ಪಿ.ಗೌಡ ಇನ್ನಿತರರು ಭಾಗವಹಿಸಿದ್ದರು.