ಸುದ್ದಿಮೂಲ ವಾರ್ತೆ
ದೇವನಹಳ್ಳಿ,ಜೂ.19 : ಕೇಂದ್ರ ಸರ್ಕಾರ ಅಕ್ಕಿಯನ್ನು ಕೊಡಲು ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರು ಗ್ರಾಮಾಂತರದ ಜಿಲ್ಲಾ ಸಂಕೀರ್ಣದಲ್ಲಿ ಸೋಮವಾರ ಶಾಂತಿಯುತ ಪ್ರತಿಭಟನೆ ನಡೆಸಿದರು.
ಈ ಕುರಿತು ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ. ಆರ್. ಗೌಡ, ಪ್ರತಿಭಟನೆ ನಡೆಸಲು ಜಿಲ್ಲಾಧಿಕಾರಿಗಳಾದ ಲತಾ ಅವರು ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು ಎಂದು ತಿಳಿಸಿದರು.