ಸುದ್ದಿಮೂಲ ವಾರ್ತೆ
ಬೆಂಗಳೂರು,ಸೆ.11: ಖಾಸಗಿ ಸಾರಿಗೆ ಒಕ್ಕೂಟದಿಂದ ಕರೆ ನೀಡಲಾಗಿದ್ದ ಬೆಂಗಳೂರು ಬಂದ್ ನಿಮದ ಸಾಕಷ್ಟು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದರು.. ಪ್ರತಿಭಟನಾಕಾರರು ಯೆಲ್ಲೋ ಬೋರ್ಡ್ ಇರುವ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ಬಂದ್ ಬಿಸಿ ಸ್ಪಿನ್ ಮಾಂತ್ರಿಕ ಮಾಜಿ ಕ್ರಿಕೆಟರ್ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ ಅವರಿಗೂ ತಟ್ಟಿತು.
ಭಾರತದ ಕ್ರಿಕೆಟ್ ತಂಡದ ದಿಗ್ಗಜ ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆಯವರು ಸೋಮವಾರ ವಿಮಾನದ ಮೂಲಕ ಬೆಂಗಳೂರಿನ ಏರ್ಪೋರ್ಟ್ಗೆ ಆಗಮಿಸಿದ್ದಾರೆ. ಈ ವೇಳೆ ಏರ್ಪೋರ್ಟ್ನಿಂದ ತಮ್ಮ ನಿವಾಸಕ್ಕೆ ಹೋಗಬೇಕೆಂದು ಕ್ಯಾಬ್ಗಳನ್ನ ಹುಡುಕಾಡಿದ್ದಾರೆ. ಆದ್ರೆ ಯಾವುದೇ ಕ್ಯಾಬ್ ಸಿಕ್ಕಿಲ್ಲ. ಹೀಗಾಗಿ ಅನಿಲ್ ಕುಂಬ್ಳೆ ಅವರು ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಅಕೌಂಟ್ನಲ್ಲಿ ಫೋಟೋ ಶೇರ್ ಮಾಡಿರುವ ಅನಿಲ್ ಕುಂಬ್ಳೆಯವರು, ವಿಮಾನ ನಿಲ್ದಾಣದಿಂದ ಬಿಎಂಟಿಸಿ ಬಸ್ ಮೂಲಕ ಮನೆಗೆ ವಾಪಸ್ ಆಗುತ್ತಿದ್ದೇನೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದೇ ವೇಳೆ ಬಿಎಂಟಿಸಿ ಕಂಡಕ್ಟರ್ಗೆ ಸೆಲ್ಫಿ ಕೊಟ್ಟಿದ್ದು, ಅನಿಲ್ ಕುಂಬ್ಳೆ ಅವರ ಸರಳತೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.