ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.27:
ಪೂರ್ವ ತಯಾರಿ ಹಾಗೂ ಸೂಕ್ತ ತರಬೇತಿ ಅಗತ್ಯ ಇರುವುದರಿಂದ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯನ್ನು ಕೆಲ ದಿನಗಳ ಮಟ್ಟಿಿಗೆ ಮುಂದೂಡಬೇಕೆಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರನ್ನು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಒತ್ತಾಾಯಿಸಿದ್ದಾರೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯನವರಿಗೆ ಸುದೀರ್ಘ ಪತ್ರ ಬರೆದಿರುವ ಸಿ.ಟಿ.ರವಿ, ರಾಜ್ಯಾಾದ್ಯಂತ ನಡೆಸುತ್ತಿಿರುವ ಸಮೀಕ್ಷೆ ಸಾಕಷ್ಟು ಗೊಂದಲದಿಂದ ಕೂಡಿದೆ. ಸಮೀಕ್ಷೆದಾರರಿಗೆ ಸೂಕ್ತವಾದ ತರಬೇತಿ, ಪೂರ್ವ ಸಿದ್ದತೆ ಇಲ್ಲದೇ ಇರುವುದರಿಂದ ಗೊಂದಲಕ್ಕೆೆ ಒಳಗಾಗಿದ್ದಾರೆ. ಹೀಗಾಗಿ ಮುಂದೂಡಬೇಕೆಂದು ಮನವಿ ಮಾಡಿದ್ದಾರೆ.
ಗಣತಿದಾರರು ಹಲವಾರು ಸಮಸ್ಯೆೆಗಳನ್ನು ಎದುರಿಸುತ್ತಿಿದ್ದಾರೆ. ಅನೇಕ ಕಡೆ ನೆಟ್ವರ್ಕ್ ಸಿಗದೆ ಗೊಂದಲಕ್ಕೆೆ ಸಿಲುಕಿದ್ದಾರೆ. ಅಲ್ಲದೆ ಅವರು ಕೆಲವು ಸಮಸ್ಯೆೆಗಳನ್ನು ಎದುರಿಸುತ್ತಿಿದ್ದಾರೆ. ಪರಿಹರಿಸುವ ಬದಲು ನೀವು ಅವರಿಗೆ ಬೆದರಿಕೆ ಹಾಕುತ್ತಿಿದ್ದೀರಿ. ಇದರಿಂದ ನಿಮ ಕನಸಿನ ಕೂಸು ಬಡವಾಗುತ್ತಿಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯು ಈಗಾಗಲೇ ಆರಂಭವಾಗಿದ್ದು, ಸಮೀಕ್ಷೆಯ ಸಂದರ್ಭದಲ್ಲಿ, ಈಗಾಗಲೇ ಹೆಚ್ಚುವರಿ ಜವಾಬ್ದಾಾರಿಗಳ ಹೊರೆಯಿಂದ ಬಳಲಿರುವ ಶಿಕ್ಷಕರು, ಇನ್ನಷ್ಟು ತೀವ್ರ ಸವಾಲುಗಳನ್ನು ಎದುರಿಸುತ್ತಿಿರುವುದು ಗಮನಕ್ಕೆೆ ಬಂದಿದೆ.
ಸಮೀಕ್ಷೆಗೆ ಸರಿಯಾದ ಪೂರ್ವ ತಯಾರಿ. ಯೋಜನೆ ಮತ್ತು ತಾಂತ್ರಿಿಕ ವ್ಯವಸ್ಥೆೆ ರೂಪಿಸುವಲ್ಲಿ ವಿಲವಾಗಿರುವ ಶಂಕೆ ಮೂಡುತ್ತಿಿದೆ. ಪ್ರಾಾಯೋಗಿಕವಾಗಿ ಟ್ರಯಲ್ ನಡೆಸಿ, ಅದರ ಅನುಭವದ ಮೇಲೆ ಸಂಪೂರ್ಣ ಸಮೀಕ್ಷಾ ಕಾರ್ಯವನ್ನು ವಿಸ್ತರಿಸಬೇಕಾಗಿತ್ತು. ಆದರೆ ಇಲ್ಲಿ ಇದ್ಯಾಾವುದನ್ನೂ ಮಾಡದೆ ಇರೋದು ಕಂಡುಬಂದಿದೆ. ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರು ಎದುರಿಸುತ್ತಿಿರುವ ಸವಾಲುಗಳು ತೀವ್ರ ಗಂಭೀರವಾಗಿದ್ದು , ಈ ಸವಾಲುಗಳನ್ನು ಬಗೆಹರಿಸಿ ಎಂದು ಕೋರಿದ್ದಾರೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಕಾರ್ಯನಿರ್ವಹಣೆಯ ಪ್ರಕ್ರಿಿಯೆಯಲ್ಲಿ ಹಲವಾರು ಗಂಭೀರ ಸವಾಲುಗಳು ಎದುರಾಗುತ್ತಿಿವೆ. ಈ ಸಮೀಕ್ಷೆಯನ್ನು ನಿರ್ವಹಿಸುತ್ತಿಿರುವ ಶಿಕ್ಷಕ ಗಣತಿದಾರರು ತಾಂತ್ರಿಿಕ ಹಾಗೂ ಪ್ರಾಾಯೋಗಿಕ ತೊಂದರೆಗಳಿಂದಾಗಿ ಗೊಂದಲಕ್ಕೀಡಾಗಿದ್ದಾರೆ. ಸಮೀಕ್ಷೆಯ ಸಮರ್ಪಕ ಪೂರ್ವತಯಾರಿ ಹಾಗೂ ತಾಂತ್ರಿಿಕ ಸೌಲಭ್ಯಗಳ ಕೊರತೆಯಿಂದ, ನಿರೀಕ್ಷಿತ ರೀತಿಯಲ್ಲಿ ಕಾರ್ಯ ಸಾಗುತ್ತಿಿಲ್ಲ ಎಂದು ಹೇಳಿದ್ದಾರೆ.

