ಸುದ್ದಿಮೂಲವಾರ್ತೆ
ಕೊಪ್ಪಳ,ನ.29:ಹಿರಿಯ ರಾಜಕಾರಣಿ ಭೀಮಣ್ಣ ಖಂಡ್ರೆಯವರ ಶತಮಾನೋತ್ಸವವನ್ನು ಡಿ 2 ರಂದು ಬೀದರ ಜಿಲ್ಲೆಯ ಬಾಲ್ಕಿಯಲ್ಲಿ ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಶರಣಪ್ಪ ಹ್ಯಾಟಿ ಹೇಳಿದರು.
ಅವರು ಇಂದು ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾತನಾಡಿ ಭೀಮಣ್ಣ ಖಂಡ್ರೆ ಕುರಿತು 860 ಪುಟಗಳ ಲೋಕನಾಯಕ ಎಂಬ ಪುಸ್ತಕ ಲೋಕರ್ಪಣೆಯನ್ನು ಮಾಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ ಸೇರಿ ಬಹುತೇಕ ರಾಜಕಾರಣಿಗಳು, ಹಾಗು ರಾಜ್ಯದ ವಿವಿಧ ಮಠಾಧಿಶರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈಗ 440 ಜನ ವೀರಶೈವ ಮಹಾಸಭಾ ಸದಸ್ಯರಾಗಿದ್ದಾರೆ. ಇನ್ನೂ ಹೆಚ್ಚಿನ ಸದಸ್ಯರಾಗಬೇಕೆಂದು ಮನವಿ ಮಾಡಿಕೊಂಡರು.
ಕೊಪ್ಪಳ ಜಿಲ್ಲೆಯಿಂದ ಸಾಕಷ್ಟು ಜನರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕಾ ಅಧ್ಯಕ್ಷ ಗುರುರಾಜ ಹಲಗೇರಿ. ಪ್ರಧಾನ ಕಾರ್ಯದರ್ಶಿ ಉಮೇಶ ಎತ್ತಿನಮನಿ