ಸುದ್ದಿಮೂಲ ವಾರ್ತೆ
ಕೆ.ಆರ್.ಪುರ ಏ.17: ಮಹದೇಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಮಾದಿಗ ಸಮುದಾಯದ ಮುಖಂಡರಿಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ ಟಿಕೆಟ್ ನೀಡುವ ಮೂಲಕ ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಆದಿಜಾಂಭವ ಜನ ಸಂಘ ಪದಾಧಿಕಾರಿಗಳು ಒತ್ತಾಯಿಸಿದರು.
ಕೆ.ಆರ್.ಪುರ ಆದಿಜಾಂಭವ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅದಿಜಾಂಭವ ಜನಸಂಘದ ಪೂರ್ವ ತಾಲ್ಲೂಕು ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, 2008 ರಲ್ಲಿ ವರ್ತೂರು ವಿಧಾನಸಭಾ ಕ್ಷೇತ್ರದಿಂದ ಪುನರ್ ವಿಂಗಡನೆ ನಂತರ ರಚನೆಯಾದ ಸತತವಾಗಿ ಮಹದೇವಪುರ ಮೀಸಲು ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಭೋವಿ ಜನಾಂಗ ದವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ಕ್ಷೇತ್ರದಲ್ಲಿ 80 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಬಹುಸಂಖ್ಯಾತ ಹೊಂದಿರುವ ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಯಾವುದೇ ರಾಜಕೀಯ ಪಕ್ಷಗಳು ನೀಡುತ್ತಿಲ್ಲ, 15 ವರ್ಷದಿಂದ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತ ಬಂದಿದೆ, ಯಾವೊಬ್ಬ ಮುಖಂಡರಿಗೂ ಟಿಕೆಟ್ ನೀಡಿದೆ ವಂಚಿಸಲಾಗುತ್ತಿದೆ. ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಿಸಿಕೊಡಬೇಕು ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಎಚ್.ನಾಗೇಶ್ ಅವರಿಗೆ ಟಿಕೆಟ್ ನೀಡಿದ್ದು, ಬಿಜೆಪಿ ಪಕ್ಷದಲ್ಲಿ ಟಿಕೆಟ್ ನೀಡಿದೆ ಹೋದರೆ ನಾವು ಬೆಂಬಲಿಸುವುದಿಲ್ಲ ಬಿಜೆಪಿ ಗೆಲುವು ಕಷ್ಟ ಹೀಗಾಗಿ ಪಕ್ಷದ ಹೈಕಾಮಾಂಡ್ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ನಮ್ಮ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟಸ್ವಾಮಿ, ರಮೇಶ್, ಮಾದೇಶ್, ಮಂಜುನಾಥ್, ಮುನೇಂದ್ರ ಮತ್ತಿತರರು ಇದ್ದರು.