ಸುದ್ದಿಮೂಲ ವಾರ್ತೆ
ಮೈಸೂರು, ಜು.15 : ಯುವ ಬಿಗ್ರೇಡ್ ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪುರಭವನ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟಿಸಿದರು.
ತಿ.ನರಸೀಪುರದಲ್ಲಿ ನಡೆದ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಅವರ ಹತ್ಯೆಯನ್ನು ವೈಭವೀಕರಿಸಿ, ರಾಜಕೀಯಕರಣಗೊಳಿಸಲು ಚಕ್ರವರ್ತಿ ಸೂಲಿಬೆಲೆ ಯತ್ನಿಸಿದ್ದಾರೆ. ಈ ಪ್ರಕರಣದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ಅವರ ಪುತ್ರನ ಹೆಸರನ್ನು ಎಳೆದು ತರಲು ಪ್ರಯತ್ನಿಸಲಾಗುತ್ತಿದೆ ಎಂದು ಖಂಡಿಸಿದರು.
ಮುಖಂಡರಾದ ಶಿವಣ್ಣ, ಕೆ.ವಿ.ದೇವೇಂದ್ರ, ಶಿವಮೂರ್ತಿ ಶಂಕರಾಪುರ, ಶಿವರಾಜ ಅರಸನಕೆರೆ, ಚಿಕ್ಕಲಿಂಗಯ್ಯ, ಪ್ರದೀಪ್ ಮತ್ತಿತರರು ಇದ್ದರು.