ಸುದ್ದಿಮೂಲ ವಾರ್ತೆ ಬೆಂಗಳೂರು, ಅ.02:
ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು, ಬಂಡೀಪುರದಲ್ಲಿ 19 ಕೋತಿಗಳ ಸಾವು ಅತೀವ ನೋವು ತಂದಿದ್ದು, ವನ್ಯಜೀವಿ ಸಂರಕ್ಷಣೆಯ ಜವಾಬ್ದಾಾರಿ ಹೆಚ್ಚಿಿಸಿದೆ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆೆ ಹೇಳಿದ್ದಾರೆ.
ವಿಧಾನಸೌಧದ ಮೆಟ್ಟಿಿಲುಗಳ ಮೇಲೆ 71ನೇ ವನ್ಯಜೀವಿ ಸಪ್ತಾಾಹದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವನ್ಯಜೀವಿ ಸಂರಕ್ಷಣಾ ಕಾಯಿದೆ ಕಟ್ಟುನಿಟ್ಟಾಾಗಿ ಜಾರಿಗೆ ತಂದಿದೆ. ಆದರೂ ಇಂತಹ ಘಟನೆಗಳು ನಡೆಯುತ್ತಿಿರುವುದು ದುರ್ದೈವ. ಭೂಮಿಯಲ್ಲಿ ಹುಟ್ಟಿಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿಿದ್ದು, ವನ ಪ್ರದೇಶ ಕ್ಷೀಣಿಸುತ್ತಿಿರುವ ಪ್ರಸಕ್ತ ಸನ್ನಿಿವೇಶದಲ್ಲಿ ವನ್ಯಜೀವಿಗಳೊಂದಿಗೆ ಸಹಬಾಳ್ವೆೆ ಅನಿವಾರ್ಯ. ವನ್ಯಜೀವಿಗಳು ಪ್ರಕೃತಿ ಸಮತೋಲನ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿಿದ್ದು, ಈ ಬಗ್ಗೆೆ ಜಾಗೃತಿ ಮೂಡಿಸುವುದೇ ಈ ಸಪ್ತಾಾಹದ ಉದ್ದೇಶವಾಗಿದೆ ಎಂದರು.
ರಾಜ್ಯ ವನ್ಯಜೀವಿ ಸಂರಕ್ಷಣೆಗೆ ಹೆಚ್ಚಿಿನ ಆದ್ಯತೆ ನೀಡಿರುವುದರಿಂದಲೇ ನಮ್ಮ ರಾಜ್ಯ ಆನೆಗಳ ಸಂಖ್ಯೆೆಯಲ್ಲಿ ನಂ.1 ಸ್ಥಾಾನದಲ್ಲಿದೆ. ರಾಜ್ಯದಲ್ಲಿ 5395 ಆನೆಗಳಿದ್ದರೆ, 563 ಹುಲಿಗಳಿವೆ. ದೇಶದಲ್ಲೇ ಅತಿ ಹೆಚ್ಚು ಹುಲಿಗಳಿರುವ ರಾಜ್ಯಗಳ ಪೈಕಿ ಕರ್ನಾಟಕ 2ನೇ ಸ್ಥಾಾನದಲ್ಲಿದೆ. ಆದರೆ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಷ ಪ್ರಾಾಶನದಿಂದ ಒಂದೇ ದಿನ ಶೇ.1ರಷ್ಟು ಹುಲಿಗಳು ಸಾವಿಗೀಡಾದವು ಇದು ಹೃದಯ ವಿದ್ರಾಾವಕ ಘಟನೆ ಎಂದು ನೋವು ವ್ಯಕ್ತಪಡಿಸಿದರು.
ಇಂತಹ ಆಘಾತಕಾರಿ ಘಟನೆಗಳು ಮರುಕಳಿಸಬಾರದು. ವನ್ಯಜೀವಿಗಳ ಸಂರಕ್ಷಣೆ ಕೇವಲ ಅರಣ್ಯ ಸಿಬ್ಬಂದಿಯ ಜವಾಬ್ದಾಾರಿ ಮಾತ್ರ ಅಲ್ಲ. ನಾಗರಿಕರ ಕರ್ತವ್ಯವೂ ಆಗಿದೆ ಎಂದ ಈಶ್ವರ ಖಂಡ್ರೆೆ, ಇಂದು ಹಲವು ವನ್ಯ ಜೀವಿಗಳು ಅಳಿವಿನ ಅಂಚಿನಲ್ಲಿವೆ. ಕೆಲವು ಅವಸಾನ ಕಂಡಿವೆ. ಹೀಗಾಗಿ ಜನರಲ್ಲಿ ಅರಣ್ಯದ ಬಗ್ಗೆೆ ವನ್ಯ ಜೀವಿಗಳ ಬಗ್ಗೆೆ ಜಾಗೃತಿ ಮೂಡಿಸುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಾಾಗಿದೆ ಎಂದರು.
ಪ್ರಕೃತಿ ಮುಂದಿನ ಪೀಳಿಗೆಯ ಆಸ್ತಿಿ : ಮನುಷ್ಯನ ಉಗಮವಾಗಿದ್ದೇ ಕಾಡಿನಲ್ಲಿ. ಅಂದು ಕಾಡಾಗಿದ್ದು ಇಂದು ನಾಡಾಗಿದೆ. ನಮ್ಮ ಸುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳುವ ಜವಾಬ್ದಾಾರಿ ನಮ್ಮ ಮೇಲಿದೆ. ಪ್ರಕೃತಿ ದೊಡ್ಡವರಿಗೆ ಸೇರಿದ್ದಲ್ಲ, ಮಕ್ಕಳಿಗೆ ಅಂದರೆ ಮುಂದಿನ ಪೀಳಿಗೆಗೆ ಸೇರಿದ ಆಸ್ತಿಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ನನ್ನ ಹುಟ್ಟುಹಬ್ಬದಂದು ಕಬಿನಿ ಹಿನ್ನೀರಿನ ಪ್ರದೇಶ ವೀಕ್ಷಣೆಗೆ ಹೋಗಿದ್ದೆ. ನಾನು ಅಲ್ಲಿ ಕಂಡ ಪ್ರಾಾಕೃತಿಕ ಸಂಪತ್ತು ಎಲ್ಲಿಯೂ ಇಲ್ಲ. ಕೇವಲ ಒಂದು ಗಂಟೆ ಅಂತರದಲ್ಲಿ ಇನ್ನೂರಕ್ಕೂ ಹೆಚ್ಚು ಆನೆಗಳನ್ನು ನೋಡಿದೆ. ಹುಲಿ, ಜಿಂಕೆಗಳು ನಮ್ಮ ಪ್ರಾಾಕೃತಿಕ ಆಸ್ತಿಿಗಳು. ರಂಗನತಿಟ್ಟು ವಿಶೇಷವಾದ ಪಕ್ಷಿಗಳ ದ್ವೀಪ ಎನ್ನಬಹುದು. ದೇಶ, ವಿದೇಶಗಳ ಹಕ್ಕಿಿಗಳು ಇಲ್ಲಿ ಕಂಡುಬರುವುದೇ ಅತ್ಯಂತ ವಿಶೇಷ ಸಂಗತಿ. ನಾವೆಲ್ಲರೂ ಈ ಸಂಪತ್ತನ್ನು ಉಳಿಸಿಕೊಳ್ಳುವ ನಿಟ್ಟಿಿನಲ್ಲಿ ಆಲೋಚನೆ ಮಾಡಬೇಕು. ಆದ ಕಾರಣಕ್ಕೆೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಲಾಗುತ್ತಿಿದೆ ಎಂದರು.
ಅನಿಲ್ ಕುಂಬ್ಳೆೆಯವರು ಅಂತರಾಷ್ಟ್ರೀಯ ಕ್ರಿಿಕೆಟಿಗರಾಗಿ ದೊಡ್ಡ ಹೆಸರು ಮಾಡಿದವರು. ನಿವೃತ್ತಿಿಯ ನಂತರ ವನ್ಯಜೀವಿಗಳ ಉಳಿವುಗಾಗಿ ಕೆಲಸ ಮಾಡುತ್ತಿಿದ್ದಾರೆ. ಕರ್ನಾಟಕದ ರಾಯಭಾರಿಯಾಗಿ ಕೆಲಸ ಮಾಡುತ್ತಿಿದ್ದಾರೆ. ಅನಿಲ್ ಕುಂಬ್ಳೆೆಯವರಂತೆ ಎಲ್ಲರೂ ಪ್ರಾಾಕೃತಿಕ ಸಂಪತ್ತನ್ನು ಉಳಿಸುತ್ತೇನೆ ಎಂದು ಸಂಕಲ್ಪ ಮಾಡಬೇಕು. ಒಬ್ಬರು ಹದಿನಾರು ಜನರಲ್ಲಿ ಜಾಗೃತಿ ಮೂಡಿಸುವೆ ಎಂದು ಸಂಕಲ್ಪ ತೊಡಬೇಕು. ನಮ್ಮ ಸಂಪತ್ತು ನಾವೇ ಉಳಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಜಿಬಿಎ ಪಾಲಿಕೆ ವ್ಯಾಾಪ್ತಿಿಯ ಶಾಲೆಗಳು ಒಂದೊಂದು ವಲಯಗಳನ್ನು ಆಯ್ಕೆೆ ಮಾಡಿ ಮಕ್ಕಳಿಂದ ಗಿಡ ಬೆಳೆಸಬೇಕು. ಕಳೆದ ಎರಡು ವರ್ಷಗಳಲ್ಲಿ 1 ಲಕ್ಷ ಸಸಿಗಳನ್ನು ನೆಟ್ಟು ಕಾಪಾಡಿದ ಇತಿಹಾಸ ನಮ್ಮದಾಗಿದೆ. ಈ ಕಾರ್ಯಕ್ರಮ ಇಡೀ ರಾಜ್ಯಕ್ಕೆೆ ವಿಸ್ತರಿಸಬೇಕು. ಪರಿಸರ ಸಚಿವರಾದ ಈಶ್ವರ ಖಂಡ್ರೆೆ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿಿದ್ದಾರೆ. ಅವರಿಗೆ ನಮ್ಮ ಸಹಕಾರ ಸದಾ ಇರುತ್ತದೆ ಎಂದರು.
ಉದ್ಘಾಾಟನಾ ಕಾರ್ಯಕ್ರಮದಲ್ಲಿ ವನ, ವನ್ಯಜೀವಿ ರಾಯಭಾರಿ ಮಾಜಿ ಕ್ರಿಿಕೆಟಿಗ ಅನಿಲ್ ಕುಂಬ್ಳೆೆ, ಅರಣ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ ಮತ್ತಿಿತರರು ಪಾಲ್ಗೊೊಂಡಿದ್ದರು
ವನ್ಯಜೀವಿ ಸಪ್ತಾಾಹಕ್ಕೆೆ ಚಾಲನೆ ನೀಡಿದ ಡಿಸಿಎಂ, ಅರಣ್ಯ ಸಚಿವ ವನ್ಯಜೀವಿಗಳೊಂದಿಗೆ ಸಹಬಾಳ್ವೆೆ ಇಂದಿನ ಅಗತ್ಯ: ಈಶ್ವರ ಖಂಡ್ರೆೆ

