ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ :
ಐದು ವಿಭಾಗಗಳಾಗಿ ಬೆಂಗಳೂರು ವಿಭಜನೆ
ಸುದ್ದಿಮೂಲ ವಾರ್ತೆ ಬೆಂಗಳೂರು, ಜು.22:
ಬೆಂಗಳೂರು ನಗರವನ್ನು ಐದು ವಿಭಾಗಗಳನ್ನಾಾಗಿ ವಿಂಗಡಿಸಿ ‘ಗ್ರೇಟರ್ ಬೆಂಗಳೂರು ಅಥಾರಿಟಿ’ ರಚನೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆೆ ಮಹತ್ವದ ತೀರ್ಮಾನ ತೆಗೆದುಕೊಂಡು ಬೆಂಗಳೂರು ಐದು ವಿಭಾಗಗಳಾಗಿ ವಿಭಜಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ ಎಂದು ರಚಿಸಿ ಅದಕ್ಕೆೆ ಮುಖ್ಯಮಂತ್ರಿಿಯನ್ನು ಅಧ್ಯಕ್ಷರನ್ನಾಾಗಿ ನೇಮಿಸಲು ಅನುಕೂಲವಾಗುವಂತೆ ಮಂಗಳವಾರ ವಿಧಾನಸಭೆಯಲ್ಲಿ ಮಸೂದೆ ಮಂಡನೆ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಒಂದು ದೇಶ-ಒಂದು ಚುನಾವಣೆ ಬಗ್ಗೆೆ ತೆಗೆದುಕೊಂಡ ನಿರ್ಣಯದ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲು ಸಹ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಇತ್ತೀಚೆಗೆ ರಾಷ್ಟ್ರವ್ಯಾಾಪಿಯಾಗಿ ನೀಟ್ ಯುಜಿ ಪರೀಕ್ಷೆಯಲ್ಲಿ ಉಂಟಾದ ಗೊಂದಲ ಹಾಗೂ ಪ್ರಶ್ನೆೆಪತ್ರಿಿಕೆ ಸೋರಿಕೆಯಿಂದಾಗಿ ಆದ ಅನಾಹುತದ ವಿರುದ್ಧ ಕೇಂದ್ರದ ಹೊಣೆ ಖಂಡಿಸಿ ನೀಟ್ ವಿರುದ್ಧ ನಿರ್ಣಯ ತೆಗೆದುಕೊಳ್ಳಲು ಸಹ ಸಂಪುಟ ಸಭೆ ನಿರ್ಣಯ ತೆಗೆದುಕೊಂಡಿರುವುದಾಗಿ ತಿಳಿದು ಬಂದಿದೆ.
ಇದಲ್ಲದೆ, ವಿಧಾನಸಭೆ ಮತ್ತು ಲೋಕಸಭೆ ಕ್ಷೇತ್ರಗಳ ಪುನರ್ವಿಂಗಡಣೆ ಮಾಡುವುದರಿಂದ ದಕ್ಷಿಣ ರಾಜ್ಯಗಳ ವಿಧಾನಸಭೆ ಮತ್ತು ಲೋಕಸಭೆ ಕ್ಷೇತ್ರಗಳು ಕಡಿಮೆ ಆಗಲಿದ್ದು ಆ ಬಗ್ಗೆೆಯೂ ಸಹ ಕ್ಷೇತ್ರ ಪುನರ್ವಿಂಗಡಣೆ ಮಾಡದಂತೆ ನಿರ್ಣಯ ತೆಗೆದುಕೊಳ್ಳಲು ಸಹ ನಿರ್ಣಯ ತೆಗೆದುಕೊಳ್ಳಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಗೊತ್ತಾಾಗಿದೆ.