ಸುದ್ದಿಮೂಲ ವಾರ್ತೆ ಬೆಂಗಳೂರು, ಅ.21:
ಮುಂಬರುವ ಸ್ಥಳೀಯ ಸಂಸ್ಥೆೆಗಳ ಚುನಾವಣೆ ಮತ್ತು ಗ್ರೇೇಟರ್ಬೆಂಗಳೂರು ಚುನಾವಣೆಗೆ ಪೂರಕವಾಗಿ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚಿಸಲು ಎರಡೂ ಪಕ್ಷಗಳು ಮುಂದಾಗಿವೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಿ ಮಾಡಿಕೊಂಡಿದ್ದವು. ಬಳಿಕ ನಡೆದ ಉಪಚುನಾವಣೆಯಲ್ಲಿಯೂ ಸಹ ಮೈತ್ರಿಿ ಮುಂದುವರಿದಿತ್ತು. ಅನೇಕ ಏಳುಬೀಳುಗಳ ಮಧ್ಯೆೆಯೂ ಮೈತ್ರಿಿ ಮುಂದುವರಿದಿದ್ದು, ಅದನ್ನು ಮತ್ತಷ್ಟು ಬಲಪಡಿಸಲು ನಿರ್ಧರಿಸಲಾಗಿದೆ.
ಇತ್ತೀಚೆಗೆ ಮಾತನಾಡಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಾಮಿ ಬಿಜೆಪಿ ಜೊತೆಗಿನ ನಮ್ಮ ಮೈತ್ರಿಿಯಲ್ಲಿ ಯಾವುದೇ ಧಕ್ಕೆೆ ಇಲ್ಲ. ಯಾರು ಏನೇ ಹುಳಿ ಹಿಂಡುವ ಪ್ರಯತ್ನ ಮಾಡಿದರೂ ಮೈತ್ರಿಿ ಮುಂದುವರಿಕೆ ನಿಶ್ಚಿಿತ ಎಂದು ಹೇಳಿದ್ದರು.
ಎರಡು ಸಮಿತಿ:
ಈ ಮಧ್ಯೆೆ ದೀಪಾವಳಿ ಅಂಗವಾಗಿ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಾಮಿ ಮತ್ತು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಶುಭಾಶಯ ಕೋರಿದ್ದಾರೆ. ಈ ಮಧ್ಯೆೆ ಪಕ್ಷ ಸಂಘಟನೆಗೆ ಎಲ್ಲರ ವಿಶ್ವಾಾಸವನ್ನು ಪಡೆಯುವ ಪ್ರಯತ್ನವನ್ನು ವಿಜಯೇಂದ್ರ ಮಾಡಿದ್ದಾರೆ.
ಕುಮಾರಸ್ವಾಾಮಿ ಅವರ ನಿವಾಸಕ್ಕೆೆ ತೆರಳಿ, ದೀಪಾವಳಿ ಶುಭಾಶಯ ಕೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚಿಸಲು ಯೋಜಿಸಿದ್ದು, ಪಕ್ಷದ ಮುಖಂಡರ ಜೊತೆ ಚರ್ಚಿಸಿ, ಸಮಿತಿಯಲ್ಲಿ ಯಾರು ಇರಲಿದ್ದಾರೆ ಎನ್ನುವುದನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.
ಕೇಂದ್ರ ಸಚಿವರೊಂದಿಗೆ ರಾಜ್ಯದ ರಾಜಕೀಯ ಪರಿಸ್ಥಿಿತಿ ಕುರಿತು ಚರ್ಚೆ ನಡೆಸಲಾಗಿದೆ. ಸಮನ್ವಯ ಸಮಿತಿಗೆ ಮುಂದಿನ ಎಂಟು-ಹತ್ತು ದಿನಗಳಲ್ಲಿ ಹೆಸರು ಕಳುಹಿಸುವುದಾಗಿ ತಿಳಿಸಿದ್ದಾರೆ ಎಂದರು.
ಗ್ರೇೇಟರ್ ಬೆಂಗಳೂರು ಪಾಲಿಕೆಗೆ ಚುನಾವಣೆಗಳು ನಡೆಯುವ ಹಿನ್ನೆೆಲೆಯಲ್ಲಿ, ಬೆಂಗಳೂರಿಗೆ ಸೀಮಿತವಾಗಿ ಸಮನ್ವಯ ಸಮಿತಿ ರಚನೆ ಮಾಡಲಾಗುವುದು. ರಾಜ್ಯಕ್ಕೆೆ ಸಂಬಂಧಿಸಿದಂತೆ, ಮತ್ತೊೊಂದು ಸಮನ್ವಯ ಸಮಿತಿ ಮಾಡುವ ಕುರಿತು ಕುಮಾರಸ್ವಾಾಮಿ ಅವರು ಸಲಹೆ ನೀಡಿದ್ದಾರೆ ಎಂದು ಹೇಳಿದರು.
ರಾಜ್ಯ ಕಾಂಗ್ರೆೆಸ್ ಸರ್ಕಾರದ ಆಡಳಿತ ವೈಖರಿ ಹದಗೆಟ್ಟಿಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪರಿಸ್ಥಿಿತಿಯೂ ಹದಗೆಟ್ಟಿಿದೆ. ಅಭಿವೃದ್ಧಿಿ ಇಲ್ಲದೇ ಜನರು ಪರದಾಡುವಂತಾಗಿದೆ. ಬೆಂಗಳೂರಿನ ಅವ್ಯವಸ್ಥೆೆ ಹೇಳತೀರದಾಗಿದೆ ಎಂದು ಅವರು ಟೀಕಿಸಿದರು.
ರಾಜ್ಯ ಸರ್ಕಾರ, ಸಚಿವರು ಅಹಂಕಾರದಿಂದ ಮೆರೆಯುತ್ತಿಿದ್ದಾರೆ. ಮೋಹನ್ದಾಸ್ ಪೈ, ಕಿರಣ್ ಮಜುಂದಾರ್ ಷಾ ಅವರಂಥ ಹಿರಿಯರು ಬೆಂಗಳೂರಿನ ಬಗ್ಗೆೆ ಮತ್ತು ರಸ್ತೆೆಗಳ ಕುರಿತು ಸಲಹೆ ನೀಡಿದರೆ, ಆ ಸಲಹೆಗಳನ್ನು ಕಿವಿಗೆ ಹಾಕಿಕೊಳ್ಳುತ್ತಿಿಲ್ಲ. ಅಂಥ ಹಿರಿಯರನ್ನು ಸ್ವತಃ ಸಚಿವರೇ ನಿಂದಿಸುತ್ತಿಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆೆ ಶೋಭೆ ತರುವುದಿಲ್ಲ ಎಂದು ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು.
ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಿಗಳಾಗಿದ್ದಾಗ ಇದೇ ರೀತಿ ಟೀಕೆ, ಸಲಹೆಗಳು ಬಂದಿದ್ದವು. ಟೀಕೆಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡಿದ್ದರು ಎಂದು ತಿಳಿಸಿದರು.
ಇಲ್ಲಿ ತುಘಲಕ್ ಸರ್ಕಾರ ನಡೆಯುತ್ತಿಿದೆಯೇ ಎಂದು ಜನರು ಪ್ರಶ್ನಿಿಸುತ್ತಿಿದ್ದಾರೆ. ಭ್ರಷ್ಟಾಾಚಾರದ ಬಗ್ಗೆೆ ಯಾವ ರೀತಿ ಚರ್ಚೆ ನಡೆಯುತ್ತಿಿದೆ? ಮೊನ್ನೆೆ ದಿನ ನಮ್ಮ ಸಂಸದ ರಾಘವೇಂದ್ರ ಅವರು ಇಲ್ಲಿ ಹಣ ಸಂಗ್ರಹಿಸಿ ಬಿಹಾರ ಚುನಾವಣೆಗೆ ತೆಗೆದುಕೊಂಡು ಹೋಗುತ್ತಿಿದ್ದಾರೆ ಎಂದು ತಿಳಿಸಿದ್ದಾರೆ. ಸಚಿವರಾದಿಯಾಗಿ ಎಲ್ಲರೂ ಸಾಕ್ಷಿ ಕೊಡಿ ಎಂದು ಕೇಳಿದ್ದಾರೆ. ಯಾಕೆ ಸ್ವಾಾಮೀ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ವಾಲ್ಮೀಕಿ ಅಭಿವೃದ್ಧಿಿ ನಿಗಮದ ಹಗರಣ ಮರೆತು ಹೋಯಿತೇ ಎಂದು ಪ್ರಶ್ನಿಿಸಿದರು.
ವಾಲ್ಮೀಕಿ ಅಭಿವೃದ್ಧಿಿ ನಿಗಮದ ಹಗರಣದಲ್ಲಿ ಹಣವನ್ನು ತೆಲಂಗಾಣಕ್ಕೆೆ ತೆಗೆದುಕೊಂಡು ಹೋಗಿ ಸಾವಿರಾರು ಬೇನಾಮಿ ಖಾತೆ ತೆರೆದು ಹಣ ಪಡೆದು ಚಿನ್ನ ಖರೀದಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲೂ ಬಳಸಲಾಗಿತ್ತು. ಇದನ್ನು ಜಾರಿ ನಿರ್ದೇಶನಾಲಯವು (ಇ.ಡಿ) ನೇರವಾಗಿ ಹೇಳಿದೆ ಎಂದು ಅವರು ಆರೋಪಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಾಮಿ, ಶಾಸಕ ಕೃಷ್ಣಪ್ಪ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಿ.ಕೆ. ರಾಮಮೂರ್ತಿ, ಮಾಜಿ ಶಾಸಕ ಎ. ಮಂಜುನಾಥ್ ಉಪಸ್ಥಿಿತರಿದ್ದರು.
ಗ್ರೇೇಟರ್ ಬೆಂಗಳೂರು ಚುನಾವಣೆ ಮತ್ತು ರಾಜ್ಯದ ಇತರೆಡೆಗೆ ಎರಡು ಪ್ರತ್ಯೇಕ ಸಮಿತಿ: ಬಿ.ವೈ. ವಿಜಯೇಂದ್ರ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆಗೆ ನಿರ್ಧಾರ
