ಸುಧ್ಧಿಮೂಲ ವಾರ್ತೆ
ಚಿಕ್ಕಬಳ್ಳಾಪುರ,ಜೂ.15: ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ನೀಡಿದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರಸ್ತುತ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಹಕಾರ್ಯದರ್ಶಿ ಆಗಿ ಸೇವೆ ಸಲ್ಲಿಸುತ್ತಿರುವ ಪಲೀಚೇರ್ಲು ಪಿ.ಆರ್.ಪ್ರಕಾಶ್ ಅವರನ್ನು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಒತ್ತಾಯ ಕೇಳಿಬರುತ್ತಿದೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ, ಬೆಂಗಳೂರು ನಗರದ ಗಾಂಧಿನಗರ ಮತ್ತು ಚಿಕ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ವೀಕ್ಷಕ ಮತ್ತು ಸಂಯೋಜಕರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಚುನಾವಣಾ ಪ್ರಚಾರ ಸಮಿತಿಯ ಸಂಚಾಲಕರಾಗಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಿಆರ್ ಪ್ರಕಾಶ್ ಅವರು ಅನೇಕ ಹುದ್ದೆಗಳನ್ನು ಅಲಂಕರಿಸಿ ಸಮರ್ಥವಾಗಿ ಸೇವೆ ಸಲ್ಲಿಸಿದ್ದಾರೆ ವೃತ್ತಿಯಲ್ಲಿ ವಕೀಲರು ಆಗಿರುವ ಉತ್ಸಾಹಿಯಾಗಿರುವ ಪಿ.ಆರ್.ಪ್ರಕಾಶ್ ಅವರು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘಟನೆಯಲ್ಲಿ ಕಳೆದ 18 ವರ್ಷಗಳಿಂದ ಪದಾಧಿಕಾರಿಯಾಗಿ ಸೇವೆ ಸಲ್ಲಿಸುವ ಮೂಲಕ ವಿಪ್ರ ಸಮಾಜದ ಪ್ರೀತಿ ವಿಶ್ವಾಸವನ್ನು ಗೆದ್ದಿದ್ದು ಅದೇ ರೀತಿ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಸಚಿವರುಗಳೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಪಿ.ಆರ್.ಪ್ರಕಾಶ್ ಅವರನ್ನು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣರ ಮಹಾಸಭಾದ ಅನೇಕ ಮುಖಂಡರು ಒತ್ತಾಯಿಸಿದ್ದಾರೆ.
ಆಖಂಡ ಕೋಲಾರ ಜಿಲ್ಲೆಯಲ್ಲಿ ಸಂಸದರಾಗಿ ವಿ.ಕೃಷ್ಣರಾವ್ ಸೇವೆ ಸಲ್ಲಿಸಿದ ಬಳಿಕ ಬೇರೆ ಯಾರಿಗೂ ಸಹ ಬ್ರಾಹ್ಮಣರ ಸಮಾಜದಲ್ಲಿ ಸೂಕ್ತ ಪ್ರಾತಿನಿದ್ಯ ದೊರೆತ್ತಿಲ್ಲ ಕಾಂಗ್ರೆಸ್ ಪಕ್ಷವೂ ನೀಡಿರುವ ಎಲ್ಲಾ ಪ್ರಮುಖ ಜವಾಬ್ದಾರಿಯನ್ನು ನಿಭಾಯಿಸಿ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿ ಪಕ್ಷದ ಸದಸ್ಯತ್ವ ನೊಂದಣಿ ಕಾರ್ಯವನ್ನು ಉತ್ತಮವಾಗಿ ನಿಭಾಯಿಸಿ ಭಾರತ್ ಜೋಡೋ ಅಭಿಯಾನದಲ್ಲಿ ಸಕ್ರೀಯವಾಗಿ ಭಾಗವಹಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದ ಪ್ರಶಂಸೆಗೆ ಪಾತ್ರರಾಗಿರುವ ಪಿ.ಆರ್.ಪ್ರಕಾಶ್ ಅವರನ್ನು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಬಯಲುಸೀಮೆಯ ಪ್ರದೇಶಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲೀಚೇರ್ಲು ಗ್ರಾಮದವರು ಆದ ಪಿ.ಆರ್.ಪ್ರಕಾಶ್ ಅವರು ವಿಪ್ರ ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಅಖಲಿ ಕರ್ನಾಟಕ ಬ್ರಾಹ್ಮಣರ ಮಹಸಭಾದ ಸಹ ಕಾರ್ಯದರ್ಶಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಬೆಂಗಳೂರು ನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಆಗಿ,ಕೆಪಿಸಿಸಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ರಾಜ್ಯ ಕಾರ್ಯಕಾರಿ ಸಮಿತಿಯ ಸಂಘಟನಾ ಕಾರ್ಯದರ್ಶಿ ಆಗಿ, ರಾಜ್ಯ ಉಪಾಧ್ಯಕ್ಷರಾಗಿ,ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಯುವಕರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯಲು ಪ್ರಯತ್ನ ಮಾಡಿದ್ದಾರೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಅಭಿಯಾನವನ್ನು ಯಶಸ್ವಿಗೊಳಿಸಲು ವೀಕ್ಷಕರಾಗಿ ಕಾರ್ಯನಿರ್ವಹಿಸಿದ್ದಾರೆ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಚಿಕ್ ಪೇಟ್ ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ಆರ್.ಪ್ರಕಾಶ್ ಅವರನ್ನು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಬ್ರಾಹ್ಮಣರ ಸಮಾಜವನ್ನು ಮತ್ತಷ್ಟು ಕಾಂಗ್ರೆಸ್ ಪಕ್ಷದತ್ತ ಸೆಳೆಯಲು ಅವಕಾಶ ಕಲ್ಪಿಸಲು ಒತ್ತಾಯಸಲಾಗಿದೆ.
ಸುಧ್ಧಿಚಿತ್ರ,ಜೂನ್15 ಸಿಕೆಬಿಪಿ01 ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಹಕಾರ್ಯದರ್ಶಿ ಪಿ.ಆರ್.ಪ್ರಕಾಶ್ ಅವರು ಮುಖಂಡರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.