ಔರಾದ್ : ಬೀದರದಿಂದ ವನಮಾರಪಳ್ಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ161ರ ಕಾಮಗಾರಿಯ ಸಮಗ್ರ ತನಿಖೆ ನಡೆಸುವಂತೆ ಸುಭಾಷ ಚಂದ್ರ ಬೋಸ್ ಯುವಕ ಸಂಘದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಈ ಕುರಿತು ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದ ಕಾರ್ಯಕರ್ತರು ರಸ್ತೆ ಕಾಮಗಾರಿ ಕಳಪೆ ಹಾಗೂ ಅವೈಜ್ಞಾನಿಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಶಂಕೆ ಇದೆ. ಇನ್ನು ಕೌಠಾ ಗ್ರಾಮದ ಬಳಿಯಲ್ಲಿ ಸೇತುವೆಗಾಗಿ ಬಳಸಲಾದ ಸಾಮಗ್ರಿಗಳು ಕಳಪೆ ಮಟ್ಟದಲ್ಲಿವೆ ಎನ್ನುವ ಆರೋಪಗಳು ಕೇಳಿ ಬರುತ್ತಿದೆ. ಕಾಮಗಾರಿಗೆ ಮರಳು ಅಥವಾ ಕೃತಕ
ಮರಳು ಬಳಸಬೇಕಿದೆ. ಆದರೆ ಇಲ್ಲಿ ಡಸ್ಟ್ ಬಳಸಲಾಗುತ್ತಿದೆ ಎಂಬ ದೂರುಗಳಿವೆ. ಆದ್ದರಿಂದ ಮೇಲಾಧಿಕಾರಿಗಳು ಕೂಡಲೇ ಹೆದ್ದಾರಿರಸ್ತೆ ಕಾಮಗಾರಿಯ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಸೇತುವೆಯ ಮೇಲೆ ಸಾವಿರಾರು ಜನ ಪ್ರಯಾಣಿಸುತ್ತಾರೆ. ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದರೇ ಜನರ ಪ್ರಾಣಕ್ಕೆ ಕತ್ತು ಬರುವ ಸಂಭವವಿದೆ. ಆದ್ದರಿಂದ ಕೌಠಾ ಸೇತುವೆ ಸೇರಿದಂತೆ ರಸ್ತೆ ಕಾಮಗಾರಿ ಗುಣಮಟ್ಟದಲ್ಲಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಈಗಾಗಲೇ ಮಾಡಿರುವ ರಸ್ತೆಯ ಬಗ್ಗೆ ಮೇಲಾಧಿಕಾರಿಗಳು ತನಿಖೆ ನಡೆಸಬೇಕು ಕಳಪೆ ಮಟ್ಟ ಕಂಡು ಬಂದಲ್ಲಿ ಯಾವುದೇ ಮುಲಾಜಿಲ್ಲದೆ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕಾನೂನು ಮೊರೆ ಹೋಗಲಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸಲ್ಲಿಸಿದ ಮನವಿಪತ್ರದಲ್ಲಿ ಸಂಘಟನೆಯ ಅಧ್ಯಕ್ಷ ರತ್ನದೀಪ ಕಸ್ತೂರೆ, ಕಾರ್ಯದರ್ಶಿ