ಸುದ್ದಿಮೂಲ ವಾರ್ತೆ
ಮೈಸೂರು,ಜೂ.20:ಶಕ್ತಿ ಯೋಜನೆಯಡಿ ಮಹಿಳೆಯರ ಟೆಂಪಲ್ ರನ್ ದಿನೇ ದಿನೇ ಹೆಚ್ಚಾಗುತ್ತಿದೆ. ಆಷಾಢ ಆರಂಭವಾಗಿರುವ ಹಿನ್ನೆಲೆ, ಚಾಮುಂಡಿ ಬೆಟ್ಟಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಮಂಗಳವಾರ ಬೆಟ್ಟಕ್ಕೆ ತೆರಳಲು ಬಸ್ ಹತ್ತಿದ್ದ ಮಹಿಳೆಯರು ಸೀಟಿಗಾಗಿ ಎಳೆದಾಡಿಕೊಂಡು, ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ.
ಮಹಿಳೆಯರು ಸೀಟಿಗಾಗಿ ಕೈಕೈ ಮಿಲಾಯಿಸಿದ್ದಾರೆ. ಬಸ್ನೊಳಗೆ ಕಿತ್ತಾಡಿಕೊಳ್ಳುತ್ತಿದ್ದ ದೃಶ್ಯವನ್ನು ಬಸ್ ನೊಳಗಿದ್ದ ಬಹುತೇಕರು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಸಚಿವರ ಸಭೆ
ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಮಹಿಳೆಯರ ದಂಡನ್ನು ನಿಯಂತ್ರಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.
ಸಚಿವ ರಾಮಲಿಂಗ ರೆಡ್ಡಿ ಅವರು, ಉಚಿತ ಪ್ರಯಾಣ ನಿಯಂತ್ರಿಸುವುದು ಕಷ್ಟವಾಗಿದೆ.ಹೊಸ ಮಾರ್ಗಸೂಚಿ ಅನಿವಾರ್ಯ. ಬುಕ್ಕಿಂಗ್ ಮೂಲಕವೇ ಪ್ರಯಾಣಕ್ಕೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ನಿರ್ಧಾರ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.