ಸುದ್ದಿಮೂಲ ವಾರ್ತೆ
ದೇವನಹಳ್ಳಿ, ಏ.11: ಕಳೆದ 10 ವರ್ಷಗಳಿಂದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ಮಾಡುವುದರಲ್ಲಿ ವಿಪಲವಾಗಿದೆ. ಈಗ ಎಲ್ಲರೂ ಒಗ್ಗಟ್ಟಾದರೆ ಮಾತ್ರ ಕಾಂಗ್ರೆಸ್ ಗೆಲುವು ಸಾಧ್ಯ ಎಂದು ಬೂದಿಗೆರೆ ಕಾಂಗ್ರೆಸ್ ಮುಖಂಡ ಎಂ. ಆರ್. ಚಂದ್ರಶೇಖರ್ ಹೇಳಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಈಗಾಗಲೇ ರಂಗೇರಿದ್ದು, ಕಾಂಗ್ರೆಸ್ ಪಕ್ಷದಿಂದ ಕೆ.ಎಚ್. ಮುನಿಯಪ್ಪ ಅವರು ಅಭ್ಯರ್ಥಿ ಎಂದು ಹೈಕಮಾಂಡ್ ಘೋಷಿಸಿದ್ದಾರೆ. ಸ್ಥಳಿಯರಿಗೆ ಟಿಕೆಟ್ ನೀಡಿದ ಕಾರಣ ಪಕ್ಷದ ಮುಖಂಡರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದ್ದು, ಅವರನ್ನು ಒಗ್ಗೂಡಿಸಲು ಕೆಎಚ್ ಮುನಿಯಪ್ಪ ಅವರು ಮಾತುಕತೆ ನಡೆಸುತ್ತಿದ್ದಾರೆ. ಒಂದು ವೇಳೆ ಒಗ್ಗಟ್ಟಾಗದಿದ್ದರೆ ಪಕ್ಷಕ್ಕೆ ಸೋಲು ಖಚಿತ ಎಂದು ಹೇಳಿದರು.
ಆದ್ದರಿಂದ ಈ ಬಾರಿ ಎಲ್ಲ ಕಾಂಗ್ರೆಸ್ ಮುಖಂಡರು ಒಟ್ಟಾಗಿ ಇದ್ದು ಈ ಭಾರಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಜಯಗೊಳಿಸಬೇಕು ಇಲ್ಲವಾದರೆ ಮುಂದಿನ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಯು ಸಹ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುವುದರಲ್ಲಿ ಬೇರೆ ಮಾತಿಲ್ಲ ಎಂದು ತಿಳಿಸಿದರು.