ಸುದ್ದಿಮೂಲ ವಾರ್ತೆ
ತುಮಕೂರು, ಸೆ.14: ಉಚ್ಛ ನ್ಯಾಯಾಲಯದ ತೀರ್ಪಿನನ್ವಯ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಆಯಾ ಜಿಲ್ಲೆಯ 2 ಸ್ನಿಂಗ್ ಸೆಂಟರ್ಗಳಿಗೆ ಮಾತ್ರ ಭೇಟಿ ನೀಡಲು ಅವಕಾಶವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಡಿ.ಎನ್. ಮಂಜುನಾಥ ಹೇಳಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗಪತ್ತೆ ಹಚ್ಚುವ ತಂತ್ರಗಳ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರೇಡಿಯೋಲಜಿಸ್ಟ್, ಸೋನೋಲಜಿಸ್ಟ್, ಸ್ಕ್ಯಾನಿಂಗ್ ವೈದ್ಯರು ತಾವು ಭೇಟಿ ನೀಡುವ ಸ್ಕ್ಯಾನಿಂಗ್ ಸೆಂಟರ್ ಹಾಗೂ ಭೇಟಿ ಸಮಯವನ್ನು ಕಡ್ಡಾಯವಾಗಿ ಎಂಪ್ಯಾನಲ್ ಮಾಡಿಸಬೇಕು. ಎಂಪ್ಯಾನಲ್ ಮಾಡದಿರುವ ಹಾಗೂ ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆಯನ್ನು ಉಲ್ಲಂಘಿಸುವ ವೈದ್ಯರ ಮೇಲೆ ಕಾನೂನು ರೀತಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅವರು ನಿರ್ದೇಶನ ನೀಡಿದರು.
ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆಯನ್ವಯ ಗರ್ಭಾವಸ್ಥೆಯಲ್ಲಿರುವ ಲಿಂಗಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧ. ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ನೋಂದಣಿ ಪ್ರಮಾಣಪತ್ರವನ್ನು ವ್ಯವಹಾರ ಸ್ಥಳದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಹಾಗೂ ಫಾರಂ-ಎಫ್, ಎ.ಎನ್.ಸಿ ನೋಂದಣಿ ಪುಸ್ತಕ, ಸ್ಕ್ಯಾನಿಂಗ್ ಇಮೇಜ್ಗಳು, ನಗದು ಪುಸ್ತಕ, ಸ್ಕ್ಯಾನಿಂಗ್ ವರದಿ, ರೆಫರಲ್ ಸ್ಲಿಪ್ ಸೇರಿದಂತೆ ಮತ್ತಿತರ ಅಗತ್ಯ ದಾಖಲಾತಿಗಳನ್ನು ನಿರ್ವಹಣೆ ಮಾಡಬೇಕು. ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳು ತಪ್ಪದೇ ಕಾಲಕಾಲಕ್ಕೆ ನೋಂದಣಿ ಮಾಡಿಸತಕ್ಕದ್ದು ಎಂದು ಅವರು ಸೂಚನೆ ನೀಡಿದರು.
ಸ್ಕ್ಯಾನಿಂಗ್ ಸೆಂಟರ್ನಲ್ಲಿ ಸೂಕ್ತ ಕಟ್ಟಡ, ಉತ್ತಮ ಗಾಳಿ, ಬೆಳಕು, ಶೌಚಾಲಯ ವ್ಯವಸ್ಥೆ ಹೊಂದಿರಬೇಕು. ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆಯನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸೂಚಿಸಿದರು.
ಸಭೆಯಲ್ಲಿ ಸ್ಕ್ಯಾನಿಂಗ್ ಸೆಂಟರ್ಗಳ ಹೆಸರು ಬದಲಾವಣೆ, ಹೊಸ ಸ್ಕ್ಯಾನಿಂಗ್ ಯಂತ್ರ, ಖರೀದಿಗೆ ಎನ್ಓಸಿ ನೀಡುವ ಸಂಬಂಧ ಸ್ವೀಕೃತ ಅರ್ಜಿಗಳ ಬಗ್ಗೆ ಚರ್ಚಿಸಲಾಯಿತು.