ಸುದ್ದಿಮೂಲ ವಾರ್ತೆ
ಮೈಸೂರು, ಜು.29: ಈ ಬಾರಿ ಐತಿಹಾಸಿಕ ಮೈಸೂರು ದಸರಾ ಮಹೋತ್ಸವನ್ನು ವಿಜೃಂಭಣೆಯಿಂದ ಆಚರಿಸಲು ಚಿಂತನೆ ನಡೆಸಲಾಗಿದ್ದು, ಇದೇ ಜುಲೈ 31 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯುವ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ಹಿಂದೆ ರಾಜ್ಯದ ಜನತೆ ಕೊವಿಡ್ನಿಂದ ತೀವ್ರ ತೊಂದರೆಗೆ ಈಡಾಗಿದ್ದರು. ಈಗ ಹೊಸ ಸರ್ಕಾರ ಬಂದಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಸಂಸ್ಕೃತಿ, ರಾಜಪರಂಪರೆ ಉಳಿಸಿಕೊಂಡು ಹೋಗುವ ದಸರಾವನ್ನು ಅದ್ದೂರಿಯಿಂದ ಆಚರಣೆ ಮಾಡಲಾಗುತ್ತದೆ.