ಸುದ್ದಿಮೂಲ ವಾರ್ತೆ
ರಾಮನಗರ ಜೂ, 28 : ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಜಿಲ್ಲೆಯ 268 ಸರ್ಕಾರಿ ಶಾಲೆಗಳ ಸುಮಾರು 15000 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು, ಶಾಲಾ ಬ್ಯಾಗ್ ಸೇರಿದಂತೆ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಿದೆ.
ತಾಲೂಕಿನ ಬಿಡದಿ ಪಟ್ಟಣದಲ್ಲಿ ಬಸ್ ನಿಲ್ದಾಣದ ಬಳಿ ಇರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಾಸಕ ಎಚ್.ಸಿ.ಬಾಲಕೃಷ್ಣ, ಹೊಸ ಶೈಕ್ಷಣಿಕ ವರ್ಷ ಆರಂಭದಲ್ಲೇ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಿ ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ನಿವಾರಿಸಿದೆ ಎಂದು ಶ್ಲಾಘಿಸಿದರು.
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ನ ಕಂಟ್ರಿ ಹೆಡ್ ಮತ್ತು ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ವಿಕ್ರಮ್ ಗುಲಾಟಿ ಮಾತನಾಡಿ, ಇಂದಿನ ಮಕ್ಕಳು ಭವಿಷ್ಯದ ರಾಷ್ಟ್ರ ನಿರ್ಮಾತೃಗಳು. ಹೀಗಾಗಿ ಅವರಲ್ಲಿ ಕಲಿಯುವ ಸಾಮಥ್ಯವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ವೃದ್ದಿಸುವುದು, ವಿದ್ಯಾರ್ಥಿಗಳ ಅಗತ್ಯಗಳನ್ನು ಒದಗಿಸುವುದು ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು.