ಸುದ್ದಿಮೂಲವಾರ್ತೆ
ಮಾನ್ವಿ ಏ-12ಮಾನ್ವಿ ತಾಲೂಕಿನ ಮಾಚನೂರು ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕಾಗಿ ಶ್ರೀ ಧರ್ಮಸ್ಥಳ ಗ್ರಾಮೀಣಭಿವೃದ್ದಿ ಯೋಜನೆಯ ವತಿಯಿಂದ 2 ಲಕ್ಷ ರೂ. ಮೊತ್ತದ ಸಹಾಯ ಧನದ ಡಿಡಿಯನ್ನು ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ ದೇವಸ್ಥಾನ ಕಮಿಟಿಯ ಅಧ್ಯಕ್ಷರಾದ ಯಲ್ಲಾಲಿಂಗ ಅವರಿಗೆ ವಿತರಿಸಿದರು.
ನಂತರ ಮಾತನಾಡಿದ ಅವರು ಶ್ರೀ ಧರ್ಮಸ್ಥಳ ಗ್ರಾಮೀಣಭಿವೃದ್ದಿ ಯೋಜನೆ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದಲ್ಲಿನ ನಿರ್ಗತಿಕರಿಗೆ ಜನಮಂಗಲ ಯೋಜನೆಯಲ್ಲಿ ಅಗತ್ಯವಾದ ದಿನ ನಿತ್ಯದ ಸಾಮಾಗ್ರಿಗಳ ವಿತರಣೆ, ನಿರ್ಗತಿಕರ ಮಾಶಾಸನ ಯೋಜನೆಯಲ್ಲಿ ಪ್ರತಿ ತಿಂಗಳು ಜೀವನ ನಿರ್ವಹಣೆಗೆ ಅಗತ್ಯವಾದ ಅರ್ಥಿಕ ನೆರವನ್ನು ವಿತರಿಸಲಾಗುವುದು. ಜ್ಞಾನದೀಪ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ವಿದ್ಯಾರ್ಥಿ ವೇತನವನ್ನು ನೀಡಲಾಗುವುದು, ದೇವಸ್ಥಾನಗಳ ಅಭಿವೃದ್ದಿಗಾಗಿ ದೇವಸ್ಥಾನ ಕಮಿಟಿಯವರು ಅರ್ಜಿ ಸಲ್ಲಿಸಿದಲ್ಲಿ ಪರಿಶೀಲನೆ ನಡೆಸಿ ಅಗತ್ಯವಾದ ಸಹಾಯ ಧನವನ್ನು ನೀಡಲಾಗುವುದು ಎಂದು ತಿಳಿಸಿದರು.
ತಾಲೂಕಿನ ಯೋಜನಾಧಿಕಾರಿ ವೇಣುಗೋಪಾಲ್ ಮಾತನಾಡಿ ತಾಲೂಕಿನ ಸ್ವಸಹಾಯ ಸಂಘಗಳ ಸದಸ್ಯರು ತಮ್ಮ ಸಂಘಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿಕೊಳ್ಳುವುದರಿಂದ ಸ್ವಾವಲಂಬಿ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಸರಸ್ವತಿ, ಸ್ಥಳೀಯ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಪ್ರವೀಣ ಕುಮಾರ್ ಸೇರಿದಂತೆ ದೇವಸ್ಥಾನ ಕಮಿಟಿಯ ಸದಸ್ಯರು ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.