ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.31
ಯಲಹಂಕ ಕೋಗಿಲು ಬಡಾವಣೆ ತೆರವು ಹಿನ್ನೆೆಲೆಯಲ್ಲಿ ನಿರಾಶ್ರಿತರಾದ ಅರ್ಹರಿಗೆ ಜ.2 ರಂದು ಮನೆಗಳ ವಿತರಣೆ ಮಾಡಲಾಗುತ್ತಿಿದೆ.
ಅರ್ಹ ಸಂತ್ರಸ್ತರಿಗೆ ಬಿಬಿಎಂಪಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆೆ ಮಾಡಿಕೊಡುವ ಬಗ್ಗೆೆ ದಾಖಲೆ ಪರಿಶೀಲನೆ ಮುಂದುವರಿದಿದೆ.
ಈ ವಿಚಾರದಲ್ಲಿ ಅರ್ಹರಿಗೆ ಮಾತ್ರ ವಸತಿ ವ್ಯವಸ್ಥೆೆ ಮಾಡಿಕೊಡುವುದು ಸರ್ಕಾರದ ಉದ್ದೇಶ. ಹೀಗಾಗಿ ತರಾತುರಿ ಮಾಡದೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡಲು ಮುಖ್ಯಮಂತ್ರಿಿಯವರು ಸೂಚನೆ ನೀಡಿದ್ದು, ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಆ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ವಸತಿ ಸಚಿವ ಜರ್ಮೀ ಅಹಮದ್ ಹೇಳಿದ್ದಾರೆ.
ಈ ಹಿನ್ನೆೆಲೆಯಲ್ಲಿ ಜನವರಿ ಒಂದರಂದು ಉದ್ದೇಶಿಸಲಾಗಿದ್ದ ಮನೆಗಳ ವಿತರಣೆ ಜನವರಿ 2 ಕ್ಕೆೆ ಮುಂದೂಡಿಕೆ ಮಾಡಲಾಗಿದೆ ಎಂದು ಅವರು ಪತ್ರಿಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

