ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ,ಜೂ.19 : ರಾಷ್ಟ್ರೀಯ ಕ್ರೀಡಾಪಟು ಜಯಂತಿ ಗ್ರಾಮ ನಾರಾಯಣಸ್ವಾಮಿ ರವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ಜಯಂತಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡುವ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮಂಜುಳಮ್ಮ, ಸಹಾಯಕಿ ವೆಂಕಟ ಲಕ್ಷ್ಮಮ್ಮ , ಎಂಪಿಸಿಎಸ್ ಅಧ್ಯಕ್ಷ ಜೆ.ಎನ್ ಅಶ್ವತಪ್ಪ,ನಾಗೇಶ್, ಗಂಗಾಧರ್,ಹೇಮಂತ್, ಇನ್ನು ಮುಂತಾದವರು ಹಾಜರಿದ್ದರು.