ಶಿಡ್ಲಘಟ್ಟ, ಆ. 21: ಮಾನವ ಬಂಧುತ್ವ ವೇದಿಕೆ ವತಿಯಿಂದ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯಲ್ಲಿ ನಾಗರಪಂಚಮಿಯ ದಿನ ಮೂಢನಂಬಿಕೆ ವಿರೋಧಿಸಿ ರೋಗಿಗಳಿಗೆ ಹಾಲು ವಿತರಿಸಲಾಯಿತು.
ಜಿಲ್ಲಾ ಮುಖಂಡ ಕುಂದಲಗುರ್ಕಿ ಮುನೀಂದ್ರ ಮಾತನಾಡಿ, ನಾಗರಪಂಚಮಿ ದಿನದಂದು ಹಾಲನ್ನು ಹುತ್ತಕ್ಕೆ ಹಾಕುವ ಮೂಲಕ ಹಾಲನ್ನು ವ್ಯರ್ಥ ಮಾಡಲಾಗುತ್ತಿದೆ. ಅದೇ ಹಾಲನ್ನು ಮಕ್ಕಳಿಗೆ, ರೋಗಿಗಳಿಗೆ, ವೃದ್ಧರಿಗೆ ನೀಡುವ ಮೂಲಕ ಸಾರ್ಥಕತೆಯನ್ನು ಕಾಣಬಹುದು ಎಂದು ಅಭಿಪ್ರಾಯಪಟ್ಟರು.
ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ಮೂರ್ತಿ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮನೋಹರ್, ಮೂಳೆ ತಜ್ಞ ಡಾ.ಪ್ರಮೋದ್, ಮಂಜುನಾಥ್, ನಾಗರಾಜ್, ನಗರಸಭೆಯ ಮಾಜಿ ಅಧ್ಯಕ್ಷ ಬಾಲಕೃಷ್ಣ, ಕುರುಬರ ಸಂಘದ ಕಾರ್ಯದರ್ಶಿ ರಾಮಾಂಜಿ, ಯುವ ಕಾಂಗ್ರೆಸ್ ಅಧ್ಯಕ್ಷ ಗುಡಿಹಳ್ಳಿ ನರೇಂದ್ರ, ದೇವರಮಳ್ಳೂರು ರವಿ, ಮುನೇಗೌಡ, ಅನಿಲ್, ಜಿಲ್ಲಾ ಉಪಾಧ್ಯಕ್ಷ ರವಿ ಮತ್ತಿತರರು ಉಪಸ್ಥಿತರಿದ್ದರು.