ಸುದ್ದಿಮೂಲ ವಾರ್ತೆ
ಮೈಸೂರು, ಸೆ.17:ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 73 ನೇ ಹುಟ್ಟು ಹಬ್ಬವನ್ನು ಭಾನುವಾರ ಜಿಲ್ಲೆಯ ಹಲವೆಡೆ ಆಚರಿಸಲಾಯಿತು. ಬಿಜೆಪಿ ಕಾರ್ಯಕರ್ತರು, ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ಮತ್ತು ಮೇಯರ್ ಶಿವಕುಮಾರ್ ಸೇರಿದಂತೆ ಹಲವರ ಸಮ್ಮುಖದಲ್ಲಿ ಚಾಮುಂಡಿಬೆಟ್ಟದಲ್ಲಿ ದೇವಿಗೆ ಪೂಜೆ ಸಲ್ಲಿಸಿ, ಈಡುಗಾಯಿ ಒಡೆದು ಸಿಹಿ ಹಂಚಿ ಸಂಭ್ರಮಿಸಲಾಯಿತು. ಸಂಸದ ಪ್ರತಾಪ್ ಸಿಂಹ ಬಿಜೆಪಿ ಕಾರ್ಯಕರ್ತರೊಂದಿಗೆ ಸೇರಿ ಪ್ರಧಾನಿ ಮೋದಿಗೆ ಜೈಕಾರ ಹಾಕಿ ಸಂಭ್ರಮಿಸಿದರು.
ಸಂಸದರಿಂದ ಪಾದಪೂಜೆ
ಜಿಲ್ಲಾ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ. ಕಾರ್ಯಕ್ರಮದ ಅಂಗವಾಗಿ ಪೌರಕಾರ್ಮಿಕರಿಗೆ ಪಾದಪೂಜೆ ಮಾಡಲಾಯಿತು. ನಗರದ ಕುರುಬಾರಹಳ್ಳಿಯ ಪೌರಕಾರ್ಮಿಕರ ಕಾಲೋನಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ ಪೌರಕಾರ್ಮಿಕರಿಗೆ ಪಾದಪೂಜೆ ಮಾಡಿದರು.