ಸುದ್ದಿಮೂಲ ವಾರ್ತೆ
ಮಡಿಕೇರಿ,ಜೂನ್.11:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಮೊದಲ ಗ್ಯಾರಂಟಿಗಳಲ್ಲೊಂದಾದ ಶಕ್ತಿ ಯೋಜನೆಗೆ ಮಡಿಕೇರಿಯಲ್ಲಿ ಚಾಲನೆ
ಯೋಜನೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು
ಕೆಎಸ್ಆರ್ಟಿಸಿಯ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ
ಮಡಿಕೇರಿಯ ಕೆಎಸ್ಆರ್ಟಿಸಿ ಬಸ್ನಿಲ್ದಾಣದಲ್ಲಿ ಆಯೋಜಿತ ಸಮಾರಂಭದಲ್ಲಿ ಯೋಜನೆಗೆ ಚಾಲನೆ
ಸರಕಾರ ಅಸ್ಥಿತ್ವಕ್ಕೆ ಬಂದ 21 ದಿನಗಳಲ್ಲಿ ಮೊದಲ ಗ್ಯಾರಂಟಿಯಾದ ಶಕ್ತಿಯೋಜನೆಗೆ ಚಾಲನೆ
ನೀಡಲಾಗಿದ್ದು, ಆ.15ರ ಒಳಗೆ ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳ ಜಾರಿ-ಸಚಿವ ಎನ್.ಎಸ್.ಭೋಸರಾಜು ಹೇಳಿಕೆ
ಸಾವಿರಾರು ಕೋಟಿ ರೂ.ಗಳ ಯೋಜನೆಯನ್ನು ಜನರಿಗೆ ತಲುಪಿಸಬೇಕಾಗಿರುವುದರಿಂದ ಯೋಜನೆಯ ಯಶಸ್ಸಿಗೆ ಅಧಿಕಾರಿಗಳ ಮತ್ತು ಜನರ ಸಹಕಾರ ಅತಿ ಮುಖ್ಯ-ಸಚಿವ ಎನ್.ಎಸ್.ಭೋಸರಾಜು ಸಲಹೆ
ಶಕ್ತಿ ಯೋಜನೆಯ ಲಾಭ ಮಹಿಳೆಯರಿಗೆ ತಲುಪಬೇಕಿರುವ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರು, ಬಸ್ಗಳನ್ನು ನಿಲ್ದಾಣಗಳಲ್ಲಿ ಕಡ್ಡಾಯವಾಗಿ ನಿಲ್ಲಿಸುವ ಮೂಲಕ ಮಹಿಳೆಯರ ಪ್ರಯಾಣಕ್ಕೆ ಅನುಕೂಲ ಕಲ್ಪಿಸಬೇಕು- ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ಗೌಡ ಸಲಹೆ
ಸಮಾರಂಭದಲ್ಲಿ ಮಡಿಕೇರಿ ನಗರಸಭಾ ಅಧ್ಯಕ್ಷೆ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್, ಕೆಎಸ್ಆರ್ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಉಪಸ್ಥಿತಿ