ಸುದ್ದಿಮೂಲ ವಾರ್ತೆ
ಬೆಂಗಳೂರು,ಏ.26: ಕನಕಪುರದ ಕೆಎಂ ಪೀರ್ ಬೀಡಿ ಕಂಪನಿ ಮಾಲೀಕ ಮೊಹಮದ್ ಇಮ್ರಾನ್ ಅಮೀರ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಮೊಹಮದ್ ಅಮೀರ್ ಅವರು ನನಗೆ ಬಹಳ ಆಪ್ತರು. ತಮ್ಮ ಕಂಪನಿ ಮೂಲಕ ಕ್ಷೇತ್ರದಲ್ಲಿ ಅನೇಕರಿಗೆ ಉದ್ಯೋಗ ಕಲ್ಪಿಸಿದ್ದರು. ಅವರ ನಿಧನದ ಸುದ್ದಿ ಕೇಳಿ ಬಹಳ ನೋವಾಗಿದೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು, ಸ್ನೇಹಿತರ ಬಳಗಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಂತಾಪ ಸೂಚಿಸಿದ್ದಾರೆ.