ಸುದ್ದಿಮೂಲ ವಾರ್ತೆ
ಕೆ.ಆರ್.ಪುರ ಏ15: ಡಾ.ಬಿ.ಆರ್. ಅಂಬೇಡ್ಕರ್ ಬದುಕು ಎಲ್ಲರಿಗೂ ಸ್ಪೂರ್ತಿಯಾಗಿದೆ ಅವರು ಕಂಡ ಪ್ರಗತಿಯ ಕನಸನ್ನು ನನಸು ಮಾಡಬೇಕಾಗಿದೆ ಎಂದು ದಮನಿತ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಸಾಮ್ರಾಟ್ ಶೇಖರ್ ಹೇಳಿದರು.
ಕೆ.ಆರ್.ಪುರದ ಬಿಬಿಎಂಪಿ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನವನ್ನು ಪ್ರತಿ ವರ್ಷ ಏಪ್ರಿಲ್ 14 ರಂದು ಭಾರತದ ಸಂವಿಧಾನ ಶಿಲ್ಪಿ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತದೆ. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಎಂದರು.
ಕಾರ್ಯಾಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ಶಿಕ್ಷಣ, ಸಂಘಟನೆ, ಹೋರಾಟದ ಮಹತ್ವವನ್ನು ಅರಿತುಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ತಮ್ಮ ಜೀವನದ ಅವಧಿಯವರೆಗೆ ದಲಿತ ದಮನಿತರ ಸಮನ್ವಯ ಹಕ್ಕುಗಳಿಗಾಗಿ ಹೋರಾಟ ಮಾಡಿದ್ದರು ಎಂದರು.
ಸಾರ್ವಜನಿಕರಿಗೆ ಮಜ್ಜಿಗೆ ಪಾನಕ ವಿತರಿಸಲಾಯಿತು. ಈ ಸಂಧರ್ಭದಲ್ಲಿ ಕೆ.ಆರ್.ಪುರ ಸಂಚಾರ ಠಾಣೆಯ ಎಎಸ್ಐ ದೇವರಾಜ್, ಕಾರ್ಯಾಧ್ಯಕ್ಷ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಜಿ.ರವಿಕುಮಾರ್, ಉಪಾಧ್ಯಕ್ಷ ಪುಷ್ಪರಾಜು, ರೋಷನ್, ರಮೇಶ್ ಬಾಬು, ವೆಂಕಟೇಶ್ ಇದ್ದರು.