ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.17: ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಅಧಿಕಾರಾವಧಿಯನ್ನು ಆರು ತಿಂಗಳ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಆಡಳಿತ ಮಂಡಳಿ ಸಭೆಯ ಬಳಿಕ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ, ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
ಡಾ. ಮಂಜುನಾಥ್ ಅವರ ಅಧಿಕಾರಾವಧಿ ಜು.19ಕ್ಕೆ ಪೂರ್ಣಗೊಳ್ಳಬೇಕಾಗಿತ್ತು. ಈ ಹಿಂದೆಯೇ ಅವರಿಗೆ ಒಂದು ವರ್ಷದ ಅಧಿಕಾರಾವಧಿಯನ್ನು ವಿಸ್ತರಿಸಿದ್ದು, ಈಗ ಪುನಃ ಆರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ.