ಸುದ್ದಿಮೂಲ ವಾರ್ತೆ
ಕೆ.ಆರ್. ಪುರ ಏ.8: ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಲೆಂದು ಅತ್ಯಂತ ಕಡಿಮೆ ದರಗಳಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಡಾ.ವಿನಾಯಕ್ ಆಲೂರು ತಿಳಿಸಿದರು.
ಕೆ.ಆರ್.ಪುರದಲ್ಲಿ ನಿರ್ಮಾಣವಾಗಿರುವ ನೂತನ ಆಲ್ಟೋರ್ ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಕೇವಲ ಹಣ ಮಾಡುವ ಉದ್ದೇಶದಿಂದ ಆಸ್ಪತ್ರೆ ನಿರ್ಮಾಣ ಮಾಡಿಲ್ಲ ಬದಲಾಗಿ ಸೇವೆಯ ದೃಷ್ಟಿಯಿಂದ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ, ಬಡ, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಲಿ ಹೆಚ್ಚು ಪ್ರಯೋಜನಕಾರಿ ಆಗಲಿದೆ. ಅಮೂಲ್ಯ ಜೀವಗಳನ್ನು ಉಳಿಸುವುದೇ ನಮ್ಮ ಮೊದಲ ಧ್ಯೇಯ ಎಂದರು.
ಆಲ್ಟೋರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಸ್ತುತ 30 ಹಾಸಿಗೆಗಳನ್ನು ಹೊಂದಿದ್ದು, ಅವುಗಳನ್ನು ಮುಂದಿನ ದಿನಗಳಲ್ಲಿ ವಿಸ್ತರಿಸಲಾಗುವುದು. ಆರೋಗ್ಯ ಸಮಸ್ಯೆಗಳಿರುವ ರೋಗಿಗಳಿಗೆ ಕೈಗೆಟುಕುವ ವೆಚ್ಚದಲ್ಲಿ ಹೈಟೆಕ್ ಸೌಲಭ್ಯಗಳೊಂದಿಗೆ ರೋಗನಿರ್ಣಯದಿಂದ ಹಿಡಿದು ಆರೋಗ್ಯ ರಕ್ಷಣೆಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಆಸ್ಪತ್ರೆಯಲ್ಲಿ ತಜ್ಞ ವೈದ್ಯರುಗಳ ತಂಡವಿದ್ದು ರೋಗಿಗಳಿಗೆ ಉತ್ತಮ ಸೇವೆ ನೀಡಲಿದ್ದಾರೆ. ತುರ್ತು ಅಪಘಾತ ಆರೈಕೆ, ವೈದ್ಯಕೀಯ ಮತ್ತು ಶಸ್ತ್ರ ಚಿಕಿತ್ಸಾ ಐಸಿಯು, ಮಾಡ್ಯುಲರ್ ಆಪರೇಷನ್ ಥಿಯೇಟರ್ 24/7 ಡಯಾಗ್ನೋಸ್ಟಿಕ್ ಮತ್ತು ಫಾರ್ಮಸಿ ಎಕ್ಸ್-ರೇ, ಅಲ್ಟ್ರಾ ಸೌಂಡ್ ಮತ್ತು ಎಂಡೋಸ್ಕೋಪಿ, ಡಯಾಲಿಸಿಸ್ ಕೇರ್, ಫಿಸಿಯೋಥೆರಪಿ, ಸೂಟೈಥೆರಪಿ, ಜನರಲ್ ಸರ್ಜರಿ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ಮೂಳೆ ಶಸ್ತ್ರಚಿಕಿತ್ಸೆ, ಪೀಡಿಯಾಟ್ರಿಕ್ಸ್ ಸೈಕಿಯಾಟ್ರಿ ಚರ್ಮರೋಗ ಶಾಸ್ತ್ರ, ರೇಡಿಯಾಲಜಿ, ಅರಿವಳಿಕೆ ಮತ್ತು ನೋವು ಔಷಧ ಫಿಸಿಯೋಥೆರಪಿ, ಲ್ಯಾಪರೊಸ್ಕೋಪಿಕ್ ಸರ್ಜರಿ, ಮೂತ್ರಶಾಸ್ತ್ರ ನೆಫ್ರಾಲಜಿ, ಕಾರ್ಡಿಯಾಲಜಿ, ಗ್ಯಾಸ್ಟ್ರೋಎಂಟರಾಲಜಿ, ಪಲ್ಮನಾಲಜಿ ಎಂಡೋಕ್ರೈನಾಲಜಿ, ನರವಿಜ್ಞಾನ, ನರಶಸ್ತ್ರಚಿಕಿತ್ಸೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಎಲ್ಲಾ ರೀತಿಯ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ. ಮೆಲ್ವಿನ್ ವಾಜ, ಡಾಲೇವಿನ್ ಗೌಡ,ಡಾ.ಹರೀಣಿ ಇದ್ದರು.