ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಜು 15 : ಗ್ಯಾರಂಟಿಗಳನ್ನು ನೀಡುವುದಾಗಿ ನಂಬಿಸಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಯೋಜನೆಗಳನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗೊಂದಲದಲ್ಲಿದ್ದಾರೆ ಎಂದು ಡಾ. ವೈ. ಎ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ವೈ.ಎ ನಾರಾಯಣಸ್ವಾಮಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳಾದರೂ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ನಿಂತ ನೀರಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಂತಹ ಸಂದರ್ಭದಲ್ಲಿ ನಡೆದಂತಹ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಅಭಿವೃದ್ಧಿ ಕಾಮಗಾರಿಗಳು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಿದ್ದರಾಮಯ್ಯರವರು ದ್ವೇಷಪೂರಿತ ರಾಜಕಾರಣದಿಂದ ಎಲ್ಲಾವನ್ನು ಸ್ಥಗಿತಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡುತ್ತೇವೆ ಅಂತ ಹೇಳಿ ಗ್ಯಾರಂಟಿ ಕಾರ್ಡನ್ನು ಮನೆ ಮನೆಗೆ ಹಂಚಿ, ಜನರಿಗೆ ಮಂಕು ಬೂದಿಯನ್ನು ಎರಚಿ ಸರ್ಕಾರ ಆಡಳಿತಕ್ಕೆ ಬಂದಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ,ಮಾಜಿ ಶಾಸಕ ಎಂ.ರಾಜಣ್ಣ,ಗ್ರಾಮಾಂತರ ಮಂಡಲ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರ ಗೌಡ, ಶ್ರೀ ಲಕ್ಷ್ಮಿ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಎನ್.ದೇವರಾಜ್ ಪ್ರಧಾನ ಕಾರ್ಯದರ್ಶಿ ಹಾರಾಡಿ ನಟರಾಜ್,ಅರೀಕೆರೆ ಮುನಿರಾಜು,ದೊಣ್ಣಹಳ್ಳಿ ರಾಮಣ್ಣ,ಸೀಕಲ್ ಆನಂದ ಗೌಡ, ಬಿಜೆಪಿ ಯುವ ಮೋರ್ಚ ನಗರ ಘಟಕ ಅಧ್ಯಕ್ಷ ಭರತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜೀವನ್ ರೆಡ್ಡಿ, ಇನ್ನು ಮುಂತಾದವರು ಹಾಜರಿದ್ದರು.