ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.09:
ಬಳ್ಳಾರಿ ಜಿಲ್ಲೆೆಯಲ್ಲಿ ಬಾಲ್ಯವಿವಾಹಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಕಾನೂನು ಕ್ರಮಗಳನ್ನು ಕಠಿಣವಾಗಿ ಅನುಷ್ಠಾಾನಗೊಳಿಸಬೇಕು ಎಂದು ಜಿಲ್ಲಾಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿಿನ ಸೂಚನೆ ನೀಡಿದ್ದಾಾರೆ.
ಜಿಲ್ಲಾಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಾಣ ಇಲಾಖೆ ಹಾಗೂ ಜಿಲ್ಲಾಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾಾ ಮಟ್ಟದ ಸಮನ್ವಯ ಸಮಿತಿ, ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚುತ್ತಿಿವೆ. ಬಾಲ್ಯವಿವಾಹಗಳು ಕಾನೂನು ಬಾಹಿರ. ಬಾಲ್ಯವಿವಾಹ ಆದಲ್ಲಿ ಮತ್ತು ಮಾಡಿದಲ್ಲಿ ಅವರ ಮೇಲೆ ಜರುಗಿಸಬಹುದಾದ ಕಠಿಣ ಕಾನೂನು ಕ್ರಮಗಳ ಕುರಿತು ಸಮುದಾಯಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಜಿಲ್ಲಾಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಸಂಡೂರು ಭಾಗದ ಚೋರನೂರು, ಬಂಡ್ರಿಿ, ಮೆಟ್ರಿಿಕಿ, ವಿಠಲಾಪುರ, ತಾರಾನಗರ ಮತ್ತು ಬಳ್ಳಾಾರಿ ತಾಲ್ಲೂಕಿನ ಶಿಡಗಿನಮೋಳ ಗ್ರಾಾಪಂ ವ್ಯಾಾಪ್ತಿಿಯಲ್ಲಿ ಸದ್ದಿಲ್ಲದೇ ಹೆಚ್ಚಾಾಗಿ ಬಾಲ್ಯವಿವಾಹ ಪ್ರಕರಣ ಕಂಡುಬರುತ್ತಿಿವೆ. ಅದರಲ್ಲೂ ಈ ಭಾಗದಲ್ಲಿ ಗರ್ಭಿಣಿ ಮಹಿಳೆಯರು ಕೇವಲ 35 ಕೆ.ಜಿ ತೂಕ ಇರುವುದು ಕಂಡುಬರುತ್ತಿಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.
ಇದಕ್ಕೆೆ ಪ್ರತಿಕ್ರಿಿಯಿಸಿದ ಜಿಲ್ಲಾಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು, ಜಿಲ್ಲೆೆಯ ಎಲ್ಲಾಾ ಉಪವಿಭಾಗಗಳ ಡಿವೈಎಸ್ಪಿಿ ಗಳೊಂದಿಗೆ ಸಭೆ ನಡೆಸಬೇಕು ಹಾಗೂ ಗ್ರಾಾಮಗಳಲ್ಲಿನ ದೇವಸ್ಥಾಾನ, ಚರ್ಚ್, ಕಲ್ಯಾಾಣ ಮಂಟಪ, ಸಮುದಾಯ ಭವನಗಳಲ್ಲಿ ನಡೆಯುವ ಮದುವೆ, ಈ ಕಾರ್ಯಕ್ರಮಕ್ಕೆೆ ಶ್ಯಾಾಮಿಯಾನ ಪರಿಕರ ವಿತರಿಸುವವರು ಒಳಗೊಂಡು ಮದುವೆ ಸಮಾರಂಭದ ಮಾಹಿತಿಯನ್ನು ಕಡ್ಡಾಾಯವಾಗಿ ಜಿಲ್ಲಾಾ ಮಕ್ಕಳ ರಕ್ಷಣಾ ಘಟಕಕ್ಕೆೆ ಸಲ್ಲಿಸುವಂತೆ ಜಿಲ್ಲಾಾಧಿಕಾರಿಯವರ ಆದೇಶ ನೀಡಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಾ ಕಾನೂನು ಸೇವೆಗಳ ಪ್ರಾಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಹೆಚ್ಚುವರಿ ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿ ನವೀನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆ ಉಪನಿರ್ದೇಶಕ ರಾಮಕೃಷ್ಣ, ಜಿಲ್ಲಾಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರದೇವಿ, ಮಕ್ಕಳ ಕಲ್ಯಾಾಣ ಸಮಿತಿಯ ಅಧ್ಯಕ್ಷೆ ತ್ರಿಿವೇಣಿ ಪತ್ತಾಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಾ ಮಟ್ಟದ ಅಧಿಕಾರಿಗಳು, ಎನ್ ಜಿಒ ಸಂಸ್ಥೆೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿಿತರಿದ್ದರು.
‘ಬಾಲ್ಯವಿವಾಹ ತಡೆಗೆ ಕಾನೂನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ’

