ಸುದ್ದಿಮೂಲವಾರ್ತೆ ಮಾನ್ವಿ ಏ-3
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ
ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ ಜಯಂತಿ ಹಾಗೂ ಭಾರತ ರತ್ನ, ಸಂವಿಧಾನ ಶಿಲ್ಪಿ
ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ತಾಲೂಕಿನಲ್ಲಿ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ ಸೂಚನೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳು ಏಪ್ರಿಲ್ 5 ರಂದು ಡಾ.ಬಾಬು ಜಗಜೀವನರಾಮ್ ಜಯಂತಿ ಹಾಗೂ ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಆದೇಶ ಹೊರಡಿಸಿರುವುದರಿಂದ ಆಯಾ ಸರಕಾರಿ ಇಲಾಖೆಗಳ ಅಧಿಕಾರಿಗಳು, ಮುಖ್ಯಸ್ಥರು ಎಲ್ಲಾ ಸರಕಾರಿ ಕಚೇರಿ, ಶಾಲಾ-ಕಾಲೇಜು, ಮತ್ತು ಸರಕಾರಿ ಸಂಸ್ಥೆಗಳಲ್ಲಿ ಸದರಿ ಜಯಂತಿ ದಿನಗಳಂದು ಮಹನೀಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕೆಂದು ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ ಅವರು ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.