ಸುದ್ದಿಮೂಲ ವಾರ್ತೆ
ಆನೇಕಲ್, ನ. 07 : ಗೋಡೆಯಲ್ಲಿ ಡ್ರಿಲ್ಲಿಂಗ್ ಕೆಲಸ ಮಾಡುವಾಗ ವಿದ್ಯುತ್ ತಗಲಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಸಮೀಪದ ಮಾಸ್ತೇನಹಳ್ಳಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ಪ್ರವೀಣ್ ಮೃತ ವ್ಯಕ್ತಿ. ಮಸ್ತೇನಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಪ್ರವೀಣ್ ಕೆಲಸ ಮಾಡುತ್ತಿದ್ದರು. ಗೋಡೆಯಲ್ಲಿ ಡ್ರಿಲ್ಲಿಂಗ್ ಕೆಲಸವನ್ನು ಮಾಡುತ್ತಿದ್ದ ಸಮಯದಲ್ಲಿ ಡ್ರೀಲಿಂಗ್ ಮಿಷಿನ್ನಿಂದ ವಿದ್ಯುತ್ ಶಾಕ್ ಹೊಡೆದಿದೆ . ಇದರಿಂದ ಸ್ಥಳದಲ್ಲಿ ಪ್ರವಿಣ್ ಮೃತಪಟ್ಟಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.