ರಾಯಚೂರು.ಜು.19:ಗ್ರಾಮೀಣಾಭೀವೃದ್ಧಿ , ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ಮತ್ತು ತಾಲೂಕ್ ಪಂಚಾಯತ್ ಹಾಗೂ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ವತಿಯಿಂದ ಮೇ 21 ರಿಂದ ಜೂನ್ 22 ರವರೆಗೆ ಹಮ್ಮಿಕೊಂಡಿರುವ ಗ್ರಾಮೀಣ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಆರೋಗ್ಯ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಉತ್ತಮ ಸ್ಫಂದನೆ ವ್ಯಕ್ತವಾಗಿದೆ. ಎಂದು ಜಿಲ್ಲಾ ಪಂಚಾಯತಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕುರೇರ ತಿಳಿಸಿದರು
ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಹಳ್ಳಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುವ ಕೂಲಿಕಾರ್ಮಿಕರಿಗೆ ಆರೋಗ್ಯ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಈ ಅಭಿಯಾನ ಮೇ 21ರಿಂದ ಜೂನ್ 22 ಮೂಲಕ ನರೇಗಾ ಕೂಲಿಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಹೆಚ್ಚು ಒತ್ತು ನೀಡಿದ್ದು ವಿಶೇಷವಾಗಿದೆ.
ಈ ಆರೋಗ್ಯ ಶಿಬಿರಗಳಲ್ಲಿ ತಜ್ಞ ವೈದ್ಯರಿಂದ ಕೂಲಿಕಾರ್ಮಿಕರ ರಕ್ತದ ಒತ್ತಡ, ಸಕ್ಕರೆ ಕಾಯಿಲೆ, ಎಚ್.ಐ.ವಿ. ಪರೀಕ್ಷೆ, ಕಣ್ಣಿನ ತಪಾಸಣೆ, ರಕ್ತ ಪರೀಕ್ಷೆ, ಹಿಮೋಗ್ಲೋಬಿನ್ ಪ್ರಮಾಣ ಮುಂತಾದ ತಪಾಸಣೆ ಮಾಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 76970 ಗುರಿಯನ್ನು ನೀಡಲಾಗಿತ್ತು, ಅದರಲ್ಲಿ 74000 ಕೂಲಿಕಾರ್ಮಿಕರಿಗೆ, ವಿಶೇಷವಾಗಿ ಮಹಿಳಾ ಕೂಲಿಕಾರ್ಮಿಕರು 52/17℅, ಭಾಗವಹಿಸಿದ್ದು 37000 ಮಹಿಳಾ ಕೂಲಿ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿದ್ದಾರೆ ರಾಜ್ಯದಲ್ಲೇ 5ನೇ ಸ್ಥಾನದಲ್ಲಿ ಇದೆ. ಈ ಕಾರ್ಯಕ್ರಮ ಬಗ್ಗೆ ಕೂಲಿಕಾರ್ಮಿಕರು ತುಂಬಾ ಹರ್ಷ ವ್ಯಕ್ತಪಡಿಸಿದ್ದಾರೆ. ಬಾಕಿ ಉಳಿದ ಕೂಲಿ ಕಾರ್ಮಿಕರಿಗೆ ಉಚಿತ ತಪಾಸಣೆ ಮಾಡಿಕೊಳ್ಳಲಿ ಎಂದು ತಿಳಿಸಿದರು ಈ ಸಂದರ್ಭದಲ್ಲಿ, ಜಿಲ್ಲಾ ಪಂಚಾಯತಿನ ಯೋಜನಾ ನಿರ್ದೇಶಕರಾದ ಪ್ರಕಾಶ್ ವಿ ಉಪಸ್ಥಿತರಿದ್ದರು