ಸುದ್ದಿಮೂಲ ವಾರ್ತೆ
ಬೇತಮಂಗಲ, ಜೂ 28 : ವಿದ್ಯಾಭ್ಯಾಸದ ರೀತಿಯಲ್ಲೇ ಕ್ರೀಡೆಗೂ ಪ್ರೋತ್ಸಾಹ ನೀಡುವ ಮೂಲಕ ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿಇಂದಿನ ವಿದ್ಯಾರ್ಥಿಗಳು ಭಾಗವಹಿಸಿ ಗುರುಗಳು ಮತ್ತು ಪೋಷಕರಿಗೆ ಕೀರ್ತಿ ತರಬೇಕೆಂದು ಜಿಲ್ಲಾ ಯುವಮಖಂಡ ಶ್ರೀನಿವಾಸ್ ಹೇಳಿದರು.
ಪಟ್ಟಣದ ಸಮೀಪದ ಗುಟ್ಟಹಳ್ಳಿ ಬಂಗಾರುತಿರುಪತಿ ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮತ್ತು ದಲಿತ ಸಂಘಟನೆಗಳಲ್ಲಿ ಸುಮಾರು ಸತತವಾಗಿ 5 ವರ್ಷಗಳು ಕಾರ್ಯನಿರ್ವಹಿಸಿ ಶೋಷಣೆಗೆ ಒಳಗಾಗುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುತ್ತಾ ಬಂದಿದ್ದೇನೆ. ಮುಂದಿನ ದಿನಗಳಲ್ಲಿಯು ಸಹ ಅನ್ಯಾಯದ ವಿರುದ್ದ ಹೋರಾಡುತ್ತೇನೆಂದರು.
ಗ್ರಾಮೀಣ ಬಾಗದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವುದರ ಜೊತೆಗೆ ಹೆಚ್ಚಾಗಿ ಕ್ರೀಡೆಯಲ್ಲಿ ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತರಬೇಕು. ನನ್ನ ಸಂಪಾದನೆಯಲ್ಲಿ ಶೇ,50% ರಷ್ಟನ್ನು ಸಮಾಜಸೇವೆಗೆ ಮಾಡಲು ನಿರ್ಧರಿಸಿದ್ದೇನೆ, ಇದೇ ರೀತಿ ಮುಂದಿನ ದಿನಗಳಲ್ಲಿಯೂ ಸಹ ನಿರಂತರವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣ, ಕ್ರೀಡೆ ವಿಷಯಗಳಲ್ಲಿ ಸದಾ ಅವರ ಪರವಾಗಿ ನಿಂತು ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಕಾಂತ್, ಕೃಷ್ಣ, ಚಿರು ಮತ್ತು ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.