ಸುದ್ದಿಮೂಲ ವಾರ್ತೆ
ಬೆಂಗಳೂರು,ಜೂ,1: ಇಂಧನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಕೆ.ಜೆ. ಜಾರ್ಜ್ ಅವರು ಮೊದಲ ಬಾರಿಗೆ ಬೆಸ್ಕಾಂ ನಿಗಮ ಕಚೇರಿಗೆ ಗುರುವಾರ ಭೇಟಿ ನೀಡಿದರು.
ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ನಿರ್ದೇಶಕ (ಹಣಕಾಸು) ದರ್ಶನ್ ಜೆ, ನಿರ್ದೇಶಕ ತಾಂತ್ರಿಕ ರಮೇಶ್ ಹೆಚ್. ಜೆ ಅವರು ನೂತನ ಸಚಿವರನ್ನು ಸ್ವಾಗತಿಸಿ, ಸನ್ಮಾನಿಸಿದರು.
ಈ ವೇಳೆ ಮಾತನಾಡಿದ ಸಚಿವರು ಬೆಸ್ಕಾಂಗೆ ಸಂಬಂಧಿಸಿದಂತೆ ಅತೀ ಶೀಘ್ರದಲ್ಲೇ ಉನ್ನತ ಅಧಿಕಾರಿಗಳ ಸಭೆ ಕರೆಯುವುದಾಗಿ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು.