ಸುದ್ದಿಮೂಲ ವಾರ್ತೆ
ರಾಮನಗರ, ಜೂ 13 : ನಗರದ ಹನುಮಂತ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಮನಗರ ತಾಲೂಕು ಘಟಕದ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮಾಭಿವೃದ್ದಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮುರುಳೀಧರ್, ಜೀವಿಗಳಿಗೆ ಪರಿಸರದ ಅವಶ್ಯಕತೆಯ ಬಗ್ಗೆ ಮಾಹಿತಿ ಕೊಟ್ಟರು. ಪರಿಸರ ಉಳಿದರೆ ಜೀವ ಉಳಿದಂತೆ.. ಪ್ರಕೃತಿ ನಾಶದಿಂದಾಗುವ ಪರಿಣಾಮಗಳನ್ನು ಮಕ್ಕಳಿಗೆ ವಿವರಿಸಿದರು.
ಶಾಲೆಯ ಮುಖ್ಯ ಶಿಕ್ಷಕಿ ಇಂದ್ರಮ್ಮ ಮಾತನಾಡಿ, ಪರಿಸರ ದಿನ ಆಚರಣೆ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಜೊತೆಗೂಡಿ ಸಸಿ ನೆಟ್ಟರು. ಈ ವೇಳೆ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಮೇಲ್ವಿಚಾರಕರಾದ ವಿನೋದ, ಮೇಲ್ವಿಚಾರಕರಾದ ಅಶೋಕ, ಸೇವಾ ಪ್ರತಿನಿಧಿ ಸುಮಾ ಮುಂತಾದವರು ಹಾಜರಿದ್ದರು.