ಸುದ್ದಿಮೂಲ ವಾರ್ತೆ ಹರಪನಹಳ್ಳಿ, ಡಿ.14:
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಪಟ್ಟಣದ ತಾಲ್ಲೂಕು ಕ್ರೀೆಡಾಂಗಣದಲ್ಲಿ ಇಂದು ಸೋಮವಾರ ಬೆಳಿಗ್ಗೆೆ 9 ಗಂಟೆಗೆ ತಾಲ್ಲೂಕು ಮಟ್ಟದ ಕ್ರೀೆಡಾಕೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ವೈ. ಪತ್ರಿಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವಂತಹ ವಿಕಲಚೇತನರು ಹೆಚ್ಚಿಿನ ಮಾಹಿತಿಗಾಗಿ ತಾಲ್ಲೂಕು ಪಂಚಾಯಿತಿ ಎಂ ಆರ್ ಡಬ್ಲ್ಯೂಗಳಾದ ಧನರಾಜ್ ಆರ್ ಮೊ.9901182525 ಮತ್ತು ನಗರಸಭೆಯ ನಗರ ಪುನರ್ವಸತಿ ಕಾರ್ಯಕರ್ತ ಜುಂಜಪ್ಪ ಕೆ ಮೊ. 9845649016 ಹಾಗೂ ಗ್ರಾಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿಿರುವ ಗ್ರಾಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ವಿಕಲಚೇತನರ ದಿನಾಚರಣೆ ಪ್ರಯುಕ್ತ ಇಂದು ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ : ಇ ಓ. ಚಂದ್ರಶೇಖರ್

