ಸುದ್ದಿಮೂಲ ವಾರ್ತೆ ಬಳ್ಳಾರಿ, ಜ.26:
ಡಾ.ಬಿ.ಆರ್ ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನದಿಂದ ದೇಶದಲ್ಲಿ ಸಮಾನತೆ ಲಭಿಸಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದ್ದಾಾರೆ.
ಜಿಲ್ಲಾಾಡಳಿತ ವತಿಯಿಂದ ನಗರದ ಬಿಎಂಸಿಆರ್ಸಿ ಮೈದಾನದ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ 77ನೇ ಗಣರಾಜ್ಯೋೋತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು.
ನಮ್ಮ ಸಂವಿಧಾನದ ಪ್ರಸ್ತಾಾವನೆಯಲ್ಲಿ ನಮ್ಮ ದೇಶದ ಜನಜೀವನದ ಆಶೋತ್ತರಗಳು ಹುದುಗಿವೆ. ಅವುಗಳನ್ನು ಸಾಕಾರಗೊಳಿಸುವ ಪ್ರಯತ್ನದಲ್ಲಿ ನಾವೆಲ್ಲರೂ ತೊಡಗಬೇಕು ಎಂದರು.
ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ ಇಲಾಖೆ, ಗೃಹರಕ್ಷಕ ದಳ ಇಲಾಖೆ ಮತ್ತು ಶಾಲಾ ಕಾಲೇಜುಗಳ ವಿದ್ಯಾಾರ್ಥಿಗಳಿಂದ ಸಮವಸದಲ್ಲಿ ಶಿಸ್ತುಬದ್ದ ಪಥಸಂಚಲನ ನಡೆಯಿತು.
ಗಣರಾಜ್ಯೋೋತ್ಸವದ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಸನ್ಮಾಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಸದ ಈ.ತುಕಾರಾಮ್, ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾಾರಿ ನಗರಾಭಿವೃದ್ಧಿಿ ಪ್ರಾಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಜಿಲ್ಲಾಾ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಪ್ರಾಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಪಾಲಿಕೆ ಉಪಮೇಯರ್ ಮುಬೀನಾ, ಬಳ್ಳಾಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ.ಪಿ.ಎಸ್ ಹರ್ಷ, ಜಿಲ್ಲಾಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿ ಡಾ.ಸುಮನ್ ಡಿ ಪೆನ್ನೇಕರ್, ಜಿಲ್ಲಾಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್.ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಡಿಎಂಎ್ ವಿಶೇಷಾಧಿಕಾರಿ ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಾ ಮಟ್ಟದ ಅಧಿಕಾರಿ-ಸಿಬ್ಬಂದಿ ವರ್ಗ, ಶಾಲಾ-ಕಾಲೇಜು ವಿದ್ಯಾಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿಿತರಿದ್ದರು.
ಸಂವಿಧಾನದಿಂದ ಸಮಾನತೆ : ಸಚಿವ ರಹೀಂ ಖಾನ್

