ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.24
ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಾಯಾಲಯದ ಆದೇಶ ಪ್ರಶ್ನಿಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಮತ್ತೆೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಅರ್ಜಿದಾರರು 5ನೇ ಆರೋಪಿಯಾಗಿದ್ದು, ಬಂಧನ ಭೀತಿಯಿಂದ ಬುಧವಾರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ.
ರೌಡಿಶೀಟರ್ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅರ್ಜಿದಾರರು ಈ ಹಿಂದೆ ಎ್ಐಆರ್ ರದ್ದು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದುಕೊಂಡಿದ್ದರು. ಅಲ್ಲದೆ, ನಿರೀಕ್ಷಣಾ ಜಾಮೀನು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಾಯಪೀಠ, ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ತನಿಖೆಗೆ ಸಹಕರಿಸಬೇಕು ಎಂದು ಸೂಚನೆ ನೀಡಿತ್ತು.
ನ್ಯಾಾಯಾಲಯದ ಆದೇಶದಂತೆ ಪ್ರಕರಣದ ತನಿಖೆ ನಡೆಸುತ್ತಿಿದ್ದ ಸಿಐಡಿ ಪೊಲೀಸರ ಮುಂದೆ ಹಾಜರಾಗಿ ವಿವರಣೆ ನೀಡಿದ್ದರು. ಆದರೆ, ಪ್ರಕರಣ ಸಂಬಂಧ ತನಿಖೆಗೆ ಅರ್ಜಿದಾರರು ಸಹಕರಿಸುತ್ತಿಿಲ್ಲ ಎಂದು ತಿಳಿಸಿ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಲು ಕೋರಿ ಸಿಐಡಿ ಪೊಲೀಸರು ಹೈಕೋರ್ಟ್ಗೆ ಮಧ್ಯಂತರ ಮನವಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ರಾಜ್ಯ ಸರ್ಕಾರದ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆೆ (ಕೋಕಾ)ಯಡಿ ತನಿಖೆ ನಡೆಸಲು ಆದೇಶಿಸಿತ್ತು. ಈ ಕ್ರಮ ಪ್ರಶ್ನಿಿಸಿ ಅರ್ಜಿದಾರರು ಹೈಕೋರ್ಟ್ಗೆ ಮತ್ತೊೊಂದು ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಾಯಾಲಯ, ಕೋಕಾ ಕಾಯ್ದೆೆಯಡಿ ವಿಚಾರಣೆ ಪ್ರಾಾರಂಭಿಸಿದ್ದ ಕ್ರಮ ರದ್ದುಪಡಿಸಿ ಆದೇಶಿಸಿತ್ತು. ಅಲ್ಲದೆ, ಈಗಾಗಲೇ ಮಂಜೂರು ಮಾಡಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ರದ್ದುಪಡಿಸಿ, ನಿರೀಕ್ಷಣಾ ಜಾಮೀನು ಕೋರಿದ್ದ ಅರ್ಜಿ ವಜಾಗೊಳಿಸಿ, ವಿಚಾರಣಾ ನ್ಯಾಾಯಾಲಯದ ಮುಂದೆ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿತ್ತು.
ಈ ಹಿನ್ನೆೆಲೆಯಲ್ಲಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ವಿಚಾರಣಾ ನ್ಯಾಾಯಾಲಯಕ್ಕೆೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಾಯಾಲಯ ಅರ್ಜಿ ವಜಾಗೊಳಿಸಿತ್ತು. ಇದೀಗ ಮತ್ತೆೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ವಿಚಾರಣೆಗೆ ನಿಗದಿಯಾಗಬೇಕಾಗಿದೆ.
ಆರೋಪ ಪಟ್ಟಿಿ ಸಲ್ಲಿಕೆ: ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ಐದನೇ ಆರೋಪಿ ಭೈರತಿ ಬಸವರಾಜ್ ಮತ್ತು 20ನೇ ಆರೋಪಿಯ ವಿರುದ್ಧ ತನಿಖೆ ನಡೆಸಬೇಕಾಗಿದೆ ಎಂದು ತಿಳಿಸಿ ಇನ್ನುಳಿದ 18 ಮಂದಿಯ ವಿರುದ್ಧ 4236 ಪುಟಗಳ ಆರೋಪ ಪಟ್ಟಿಿ ಸಲ್ಲಿಸಿದ್ದರು.
ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಆರೋಪದ ಮೇಲೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎ್ಐಆರ್ ದಾಖಲಾಗಿತ್ತು. ಜಮೀನು ವಿವಾದಕ್ಕೆೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿಿ ನೀಡಿದ ದೂರಿನ ಮೇರೆಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿಿದ್ದಾರೆ.

